ನಟ ದುನಿಯಾ ವಿಜಯ್ ತಂದೆ ನಿಧನ

ದುನಿಯಾ ವಿಜಯ್ ತಂದೆ ರುದ್ರಪ್ಪ ಇಂದು ಬೆಳಗ್ಗೆ 7:30 ರಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ತಿಂಗಳ ಹಿಂದೆ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ನಿಧನರಾಗಿದ್ದರು, ಈಗ ಅವರ ತಂದೆ ರುದ್ರಪ್ಪ(81 ವರ್ಷ) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸರಿಸುಮಾರು 7:30 ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಆನೆಕಲ್ ನ ಕುಂಬಾರಹಳ್ಳಿಯಲ್ಲಿ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

About The Author