BREAKING: ‘ನಟ ಶಿವರಾಜ್ ಕುಮಾರ್’ಗೆ ಅನಾರೋಗ್ಯ: ಆಸ್ಪತ್ರೆಗೆ ತೆರಳಿ ಚಿಕಿತ್ಸೆ

ಮೈಸೂರು: ವೇದಾ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಂತ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡು, ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮರಳಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವಂತ ವೇದಾ ಸಿನಿಮಾ ಶೂಟಿಂಗ್ ನಲ್ಲಿ ಅವರು ಬ್ಯುಸಿಯಾಗಿದ್ದರು. ಶೂಟಿಂಗ್ ನಲ್ಲಿ ಇದ್ದಂತ ಸಂದರ್ಭದಲ್ಲಿಯೇ ಅವರಿಗೆ ಜ್ವರ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು ಎನ್ನಲಾಗಿದೆ.

ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ತೆರಳಿ, ಜನರಲ್ ಚೆಕಪ್ ಗೆ ಒಳಗಾದಂತ ಅವರು, ಜ್ವರಕ್ಕೆ ವೈದ್ಯರಿಂದ ಚಿಕಿತ್ಸೆ ಪಡೆದು, ಮತ್ತೆ ಶೂಟಿಂಗ್ ಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ.

About The Author