- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾದಕವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಶುರುವಾಗಿದ್ದು, ಇಂದು ರಿಯಲ್ ಸ್ಟಾರ್ ಉಪೇಂದ್ರ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ನಗರದ ಬಿವಿಬಿ ಕಾಲೇಜಿನಲ್ಲಿ ಈ ಅಭಿಯಾನ ನಡೆದಿದ್ದು, ಕಾಲೇಜಿನಿಂದ ನಗರದ ತೋಳನಕೆರೆವರೆಗೆ ವಾಕಥಾನ್ ನಡೆಸಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ವಾಕ್‌ಥಾನ್ ಮೂಲಕ ಉಪೇಂದ್ರ ತೆರಳಿದರು. ಹು-ಧಾ ಅವಳಿ ನಗರದ ಎಲ್ಲಾ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಸಹಭಾಗಿತ್ವದಲ್ಲಿ ಅಭಿಯಾನ ನಡೆದಿದ್ದು, ಈ ಅಭಿಯಾನದಲ್ಲಿ ಅಪರಾಧ ತಡೆ, ಸಂಚಾರ ನಿಯಮ ಮತ್ತು ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಮೂಡಿಸಲಾಯಿತು.
ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದು, ಧಾರವಾಡ ಜಿಲ್ಲಾಧಿಕಾರಿ ದಿವ್ಯಾಪ್ರಭು, ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹಾಗೂ ಕಾಲೇಜು ಆಡಳಿತ ಮಂಡಳಿ ಎಲ್ಲರೂ ಈ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.
- Advertisement -