ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ. ಪಿ ಎಫ್ ಐ ಸಂಘಟನೆ ನಮ್ಮ ಹಾಗೂ ನೆರೆ ರಾಜ್ಯಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದೆ. ದೇಶವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದೆ ಬಿಜೆಪಿಯ ಹಲವಾರು ಕಾರ್ಯಕರ್ತರ ಮಾರಣಹೋಮ ನಡೆಸಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡ ಕಾರ್ಯಕರ್ತರನ್ನು ಸಿದ್ದರಾಮಯ್ಯನವರ ಆಡಳಿತದ ಅವಧಿಯಲ್ಲಿ ಬಿಡುಗಡೆಗೊಳಿಸುತ್ತಾರೆ ಎಂದು ಮಾಳವಿಕಾ ಕಿಡಿಕಾರಿದ್ದಾರೆ.
ಪಿ ಎಫ್ ಐ ನಡೆಸಿರುವ ದುಷ್ಕೃತ್ಯಗಳ ಹಿನ್ನೆಲೆಯಲ್ಲಿ ನಿಷೇಧ ಮಾಡುತ್ತಿದ್ದಾರೆ. ಆದರೆ ಸಾಂಸ್ಕೃತಿಕವಾಗಿ ಹಾಗೂ ಧಾರ್ಮಿಕವಾಗಿ ಕೆಲಸ ಮಾಡುತ್ತಿರುವ ಬಜರಂಗದಳ ಸಂಘಟನೆಯನ್ನು ಪಿಎಫ್ ಐ ಜೊತೆ ಹೋಲಿಕೆ ಮಾಡಿ ನಿಷೇಧ ಮಾಡುತ್ತೇವೆ ಎನ್ನುವುದು ಮಹಾ ಅಪರಾಧವಾಗಿದೆ. ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಹಾಗಾಗಿ ನಿಷೇಧದ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಕಾಂಗ್ರೆಸ್ ಪಕ್ಷ ಬಜರಂಗದಳ ನಿಷೇಧ ಮಾಡುವ ಪ್ರಯತ್ನ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ ಏಕೆಂದರೆ ರಾಜ್ಯದ ಜನ ಬುದ್ಧಿವಂತರಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
‘ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಬರಲ್ಲ, ಚುನಾವಣೆ ಬಂದಾಗ ಬರುತಾರೆ, ಕೈ ಬೀಸಿ ಹೋಗುತ್ತಾರೆ’
‘ಅಯೋಧ್ಯೆಯಲ್ಲಿ ರಾಮ ಮಂದಿರ, ಅಂಜನಾದ್ರಿಯಲ್ಲಿ ಹನುಮ ಮಂದಿರ ನಿರ್ಮಾಣ ನಮ್ಮ ಧ್ಯೇಯ’