Friday, March 14, 2025

Latest Posts

ರಾಮಮಂದಿರ ನಿರ್ಮಾಣ ನಿಧಿಗೆ 1 ಲಕ್ಷ ಹಣ ನೆರವು ನೀಡಿದ ಮಿಲ್ಕಿ ಬ್ಯೂಟಿ ಪ್ರಣೀತಾ ಸುಭಾಷ್…!

- Advertisement -

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ನಿಧಿ ಸಂಗ್ರಹ ಕಾರ್ಯ ನಡೆಯುತ್ತಿದೆ. ದೇಶಾದ್ಯಂತ ಮನೆ ಮನೆಗೆ ತೆರೆಳಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲಾಗುತ್ತಿದ್ದು, ಈ ಮಹಾನ್ ಕಾರ್ಯಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಕೈ ಜೋಡಿಸಿದ್ದಾರೆ.

ಕರ್ನಾಟಕದಲ್ಲಿ ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಿಸುತ್ತಿದ್ದು, ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಪ್ರಣೀತಾ ಒಂದು ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಪ್ರಣೀತಾ, ”ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ ನೀಡಿದ್ದೇನೆ. ನೀವೆಲ್ಲರೂ ಕೈಜೋಡಿಸಿ ಈ ಐತಿಹಾಸಿಕ ಅಭಿಯಾನದಲ್ಲಿ ಭಾಗಿಯಾಗಿ” ಎಂದು ಮನವಿ ಮಾಡಿಕೊಂಡಿದ್ದಾರೆ.

- Advertisement -

Latest Posts

Don't Miss