ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಪಟ್ಟಂತೆ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಮುಂದಿನ ವಾರಕ್ಕೆ ಮುಂದೂಡಿದೆ.
ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು. ಇದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇಂದು ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್, ನವೀನ್ ಸಿನ್ಹಾ ಮತ್ತು ಇಂದು ಮಲ್ಹೋತ್ರಾ ಅವರುಗಳು ರಾಗಿಣಿ ಹಾಗೂ ಶಿವಪ್ರಕಾಶ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದ್ದಾರೆ.

ಅಂದಹಾಗೇ ರಾಗಿಣಿ ದ್ವಿವೇದಿಯನ್ನು ಡ್ರಗ್ಸ್ ಸೇವನೆ ಮತ್ತು ಮಾರಾಟದ ಆರೋಪದಡಿ ಸೆಪ್ಟೆಂಬರ್ 3 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ಡ್ರಗ್ಸ್ ಪ್ರಕರಣದಡಿ ಬಂಧನಕ್ಕೆ ಒಳಗಾಗಿದ್ದ ನಟಿ ಸಂಜನಾ ಗಲ್ರಾನಿಗೆ ಇತ್ತೀಚೆಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಅದರಂತೆ ಇಂದು ತಮಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರಾಗಿಣಿಗೆ ಭಾರೀ ನಿರಾಸೆಯಾಗಿದೆ.