ಕೆಲವು ನಟ ನಟಿಯರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟೀವ್ ಆಗಿರುತ್ತಾರೆ. ತಮ್ಮ ದಿನನಿತ್ಯದ ಆಗು ಹೋಗುಗಳನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಅಂಥವರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಕೂಡ ಒಬ್ಬರು. ಆದರೆ, ಈ ನಟ ಈಗ ಸೋಶಿಯಲ್ ಮಿಡಿಯಾಗೆ ಗುಡ್ ಬೈ ಹೇಳಿದ್ದಾರೆ.
ಸದ್ಯ ನಾನು ಟ್ವಿಟರ್, ಫೇಸ್ಬುಕ್ ಇನ್ಸ್ಟಾಗ್ರಾಮ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿಲ್ಲ. ಸದ್ಯದ ಮಟ್ಟಿಗೆ ಎಲ್ಲದಕ್ಕೂ ಗುಡ್ ಬೈ ಹೇಳುತ್ತಿದ್ದೇನೆ ಎಂದು ಅಮೀರ್ ಖಾನ್ ಹೇಳಿಕೊಂಡಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಹೇಳಿಕೆ ನೀಡಿರುವ ಖಾನ್, ಇದು ನನ್ನ ಕೊನೆಯ ಪೋಸ್ಟ್, ಸಾಮಾಜಿಕ ಜಲತಾಣಗಳ ಬಳಕೆಯನ್ನು ನಿಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.
ಅದಕ್ಕೆ ಅಮೀರ್ ಖಾನ್ ಕೊಟ್ಟಿರುವ ಕಾರಣ ಸಿನಿಮಾಗಳ ಮೇಲೆ ಹೆಚ್ಚು ಗಮನ ಹರಿಸಬೇಕಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಲ್ಲುಸುತ್ತಿದ್ದೇನೆ. ನನ್ನ ಎಲ್ಲ ಪ್ರಮುಖ ಪೋಸ್ಟ್ ಗಳನ್ನು ಇನ್ನು ಮುಂದೆ ಅಮೀರ್ ಖಾನ್ ಪ್ರೊಡಕ್ಷನ್ ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಅಮೀರ್ ಖಾನ್ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದರು. ಆದರೆ ಮಾರನೆಯ ದಿನವೇ ಇಂತಹುದೊಂದು ನಿರ್ಧಾರ ಪ್ರಕಟಿಸಿ ಅಚ್ಚರಿ ಮೂಡಿಸಿದ್ದಾರೆ.