Hubballi News: ಹುಬ್ಬಳ್ಳಿ: ಇಂದು ಗೋಕುಲ ರಸ್ತೆಯ ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ, ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆ.ಎಲ್.ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಮತ್ತು ಹುಬ್ಬಳ್ಳಿ ಧಾರವಾಡ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಹುಬ್ಬಳ್ಳಿ ಇವುಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂಬ ಧ್ಯೇಯವಾಕ್ಯದಡಿಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ಮತ್ತು ಕಾರ್ ರ್ಯಾಲಿಗೆ ಅಪರ ಸಾರಿಗೆ ಆಯುಕ್ತರಾದ ಮಾರುತಿ ಸಾಂಬ್ರಾಣಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಂಟಿ ಸಾರಿಗೆ ಆಯುಕ್ತರಾದ ಓಂಕಾರೇಶ್ವರಿ ಎಂ. ಪಿ., ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ, ಭೀಮನಗೌಡ ಪಾಟೀಲ, ಕೆಎಲ್ ಇ ಐಟಿ ಪ್ರಾಚಾರ್ಯರಾದ ಪ್ರೊ.ಶರದ ಜೋಶಿ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ ಅಧ್ಯಕ್ಷರಾದ ಡಾ.ನಾಗರಾಜ ಶೆಟ್ಟಿ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ ಕಾರ್ಯದರ್ಶಿ ಪ್ರಕಾಶ ಇರಕಲ್ಲ, ಇವೆಂಟ್ ಚೇರಮನ್ ಶಂಕರ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಗೋಕುಲ ರಸ್ತೆಯ ಕೆ.ಎಲ್.ಇ. ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ವಿದ್ಯಾನಗರದ ಬಿವಿಬಿ ಕಾಲೇಜು ಕ್ಯಾಂಪಸ್ ವರೆಗೆ ಬೈಕ್ ಮತ್ತು ಕಾರ್ ರ್ಯಾಲಿ ನಡೆಯಿತು.
ಡ್ರೋನ್ ಪ್ರತಾಪ್ ವಿನ್ನರ್ ಆಗದ ಕಾರಣ, ಚಾಲೆಂಜ್ ಸೋತ ಅಭಿಮಾನಿ: ಅರ್ಧ ಗಡ್ಡ, ಮೀಸೆಗೆ ಕತ್ತರಿ