Thursday, January 23, 2025

Latest Posts

ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದ ರಹಸ್ಯ ಬಯಲು, ರೊಚ್ಚಿಗೆದ್ದ ಚಾಲಕ ಕೊಲೆಗಡುಕನಾದ

- Advertisement -

Bengaluru Crime news: ಬೆಂಗಳೂರು: ನಗರದಲ್ಲಿ ಸಂಚಲನ ಮೂಡಿಸಿದ್ದ ಬೆಂಗಳೂರು ಗ್ರಾಮಾಂತರ ಗಣಿ ಮತ್ತು ಭೂವಿಜ್ಞಾನ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಕೊಲೆ (Officer murder, Murder Case) ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಮಾ ಅವರ ಹಳೆ ಡ್ರೈವರ್ ಕಿರಣ್ ಎಂಬಾತನಿಂದ ಕೊಲೆ ನಡೆದಿರುವುದು ಬಹಿರಂಗವಾಗಿದೆ..

ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ವಿಚಾರಣೆ ವೇಳೆ ಕೊಲೆ ಮಾಡಿದ್ದು ಒಬ್ಬನೇ ಎಂಬುದು ಬಯಲಿಗೆ ಬಂದಿದೆ. ಈತನನ್ನು ಒಂದು ವಾರದ ಹಿಂದೆ ಪ್ರತಿಮಾ ಕೆಲಸದಿಂದ ತೆಗೆದಿದ್ದರು. ಕೆಲ ವಿಚಾರಗಳಿಗೆ ಪ್ರತಿಮಾ ಮತ್ತು ಕಿರಣ್ ನಡುವೆ ಭಿನ್ನಾಭಿಪ್ರಾಯ ಮೂಡಿದ್ದ ಹಿನ್ನೆಲೆಯಲ್ಲಿ ಕೆಲಸದಿಂದ ತೆಗೆದುಹಾಕಿದ್ದರು. ಇದರಿಂದ ಕೋಪಗೊಂಡಿದ್ದ ಕಿರಣ್, ಮನೆಗೆ ಬಂದು ಕೊಲೆ ಮಾಡಿದ್ದಾನೆ. ಸದ್ಯ ಕಿರಣ್‌ನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್‌ಮೆಂಟ್‌ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ (45) ಅವರ ಬರ್ಬರ ಹತ್ಯೆಯಾಗಿತ್ತು.ದೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ (ನ.4) ರಾತ್ರಿ 8.30ರ ಸುಮಾರಿಗೆ ಹತ್ಯೆ ನಡೆದಿದೆ. ಪ್ರತಿಮಾಳಿಗೆ ಶನಿವಾರ ರಾತ್ರಿ ಅವರ ಸಹೋದರ ಕರೆ ಮಾಡಿದ್ದು, ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಭಾನುವಾರ ಬೆಳಗ್ಗೆ ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿತ್ತು.

ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿರಲಿಲ್ಲ. ಕಳೆದ ಎಂಟು ವರ್ಷಗಳಿಂದ ದೊಡ್ಡಕಲ್ಲಸಂದ್ರದಲ್ಲಿ ಪ್ರತಿಮಾ ವಾಸವಾಗಿದ್ದರು. ಪ್ರತಿಮಾ ಅವರ ಪತಿ ಸತ್ಯನಾರಾಯಣ, ಮಗ ತೀರ್ಥಹಳ್ಳಿಯಲ್ಲಿ ವಾಸವಾಗಿದ್ದರು. ದೊಡ್ಡಕಲ್ಲಸಂದ್ರದಲ್ಲಿ ಈಕೆ ಒಬ್ಬರೇ ವಾಸ ಮಾಡುತ್ತಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿ ಕೆಲಸವನ್ನು ಮುಗಿಸಿ ಪ್ರತಿಮಾರನ್ನು ಚಾಲಕ ಸರ್ಕಾರಿ ಕಾರಿನಲ್ಲೇ ಮನೆಗೆ ಬಿಟ್ಟು ತೆರಳಿದ್ದ.

ಪ್ರತಿಮಾ ಹತ್ಯೆ ವಿಚಾರಣೆಗಾಗಿ ಪೊಲೀಸರು ಆರು ಟೀಮ್‌ ರಚಿಸಿದ್ದರು. ಇದರಲ್ಲಿ ಭೂಮಾಫಿಯಾ, ಅಕ್ರಮ ಗಣಿಗಾರಿಕೆ ಮಾಫಿಯಾ ಕೈವಾಡ ಇತ್ಯಾದಿ ಶಂಕೆಗಳು ತಲೆದೋರಿದ್ದವು. ಹುಣಸಮಾರನಹಳ್ಳಿ ಮತ್ತು ಸೊಣ್ಣಪ್ಪನಹಳ್ಳಿ ಭೂ ಸರ್ವೆ ಮಾಡಿದ್ದ ಪ್ರತಿಮಾ, 4 ಎಕರೆ 5 ಗುಂಟೆ ಜಮೀನಿನಲ್ಲಿ ಅಕ್ರಮ ಗಣಿಗಾರಿಗೆ ಮಾಡಿ 25 ಲಕ್ಷ ನಷ್ಟ ಉಂಟುಮಾಡಿದ್ದನ್ನು ಪತ್ತೆ ಮಾಡಿ ವರದಿ ನೀಡಿದ್ದರು. ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ಶಾಸಕರೊಬ್ಬರು ಸೇರಿದಂತೆ ನಾಲ್ಕು ಜನರ‌ ವಿರುದ್ಧ ಎಫ್.ಐ.ಆರ್ ಕೂಡ ದಾಖಲಾಗಿತ್ತು. ಇತ್ತೀಚೆಗೆ ಹಲವು ಅಕ್ರಮ ಮೈನಿಂಗ್‌ ಸಂಬಂಧಿಸಿ ಪ್ರತಿಮಾ ದಾಳಿಗಳನ್ನು ನಡೆಸಿದ್ದರು. ಈ ಕೋನದಲ್ಲೂ ತನಿಖೆ ನಡೆದಿತ್ತು.

KPSC ಎಕ್ಸಾಂನಲ್ಲಿ ಮಾಂಗಲ್ಯ ಸರ ತೆಗೆಸಿದ ಸಿಬ್ಬಂದಿ

ಕಾಂಗ್ರೆಸ್’ನವರು ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ: Govind Karajola

ಕಮಲ ಪಡೆಗೆ ಮತ್ತೊಂದು ಶಾಕ್ ಕೊಟ್ಟ ಜಗದೀಶ್ ಶೆಟ್ಟರ್; ಬಿಜೆಪಿಯ ಮತ್ತೊಬ್ಬ ಮಾಜಿ ಶಾಸಕ ಕಾಂಗ್ರೆಸ್ಗೆ

- Advertisement -

Latest Posts

Don't Miss