- Advertisement -
ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೂಲಗಳ ಪ್ರಕಾರ, ಅಧೀರ್ ಅವರು ಕೆಲವು ದಿನಗಳ ಹಿಂದೆಯೇ ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಹೈಕಮಾಂಡ್ ರಾಜೀನಾಮೆ ಪತ್ರವನ್ನು ಅಂಗೀಕರಿಸಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ.
- Advertisement -