Thursday, April 17, 2025

Latest Posts

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕನ್ನಡತಿ…

- Advertisement -

www.karnatakatv.net: ಕ್ರೀಡೆ: ಬೆಂಗಳೂರು- ಮುಂಬರುವ ಟೋಕಿಯೋ ಒಲಿಂಪಿಕ್ಸ್ ಗೆ ಬೆಂಗಳೂರು ಮೂಲದ ಅದಿತಿ ಅಶೋಕ್ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್ ‍ಗೆ ಅರ್ಹತೆ ಪಡೆದದ ಭಾರತದ ಮೊದಲ ಮಹಿಳಾ ಗಾಲ್ಫರ್ ಎನ್ನುವ ಗೌರವಕ್ಕೆ ಭಾಜನರಾಗಿದ್ದಾರೆ. ಕಳೆದ 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನ ಪ್ರತಿನಿಧಿಸಿದ್ದ ಅದಿತಿ, ಸದ್ಯ 45ನೇ ಶ್ರೇಯಾಂಕವನ್ನು ಹೊಂದಿದ್ರು. ಇದೀಗ 2ನೇ ಬಾರಿಗೆ ಒಲಿಂಪಿಕ್ಸ್ ನಲ್ಲಿ ಕಣಕ್ಕಿಳಿಯಲು ಟಿಕೆಟ್ ಪಕ್ಕಾ ಮಾಡಿಕೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುವುದು ನನ್ನ ಪಾಲಿಗೆ ಗೌರವದ ವಿಚಾರ. ರಿಯೋ ಒಲಿಂಪಿಕ್ಸ್ ನಿನ್ನೆ ಮುಗಿದಂತೆ ಅನಿಸುತ್ತಿದೆ. ನಾನು ಟೋಕಿಯೋ ಒಲಿಂಪಿಕ್ಸ್ ನಲ್ಲಿ ನನ್ನ ಕ್ರೀಡೆಯನ್ನು ಅನಾವರಣ ಮಾಡಲು ಉತ್ಸುಕಳಾಗಿದ್ದೇನೆ ಎಂದು ಅದಿತಿ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss