Tuesday, April 15, 2025

Latest Posts

Cm ಬೊಮ್ಮಾಯಿ ಆಸ್ಪತ್ರೆಗೆ ದಾಖಲು.

- Advertisement -

ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ನಿನ್ನೆ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರ ಮಗ ಮತ್ತು ಸೊಸೆಗೂ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಬೊಮ್ಮಾಯಿ ತೆರಳಿದ್ದಾರೆ ಎನ್ನಲಾಗಿದೆ.

- Advertisement -

Latest Posts

Don't Miss