Political News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ವೀರಶೈವ ಮಹಾಸಭಾ ಮಹಾ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ.
ವೀರಶೈವ ಮಹಾಸಭಾ ಮೂರು ನಾಲ್ಕು ವರ್ಷಗಳಿಗೊಮ್ಮೆ ಮಹಾಧೀವೇಶನ ಮಾಡುತ್ತದೆ. 24ರ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದೆ ನಾನು ಭಾಗವಹಿಸುತ್ತೇನೆ. ಬರೀ ಜಾತಿಜನಗಣಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಎರಡು ಮೂರು ಪ್ರಮುಖ ವಿಚಾರಗಳಿಗೆ ಸಭೆ ನಡೆಯುತ್ತಿದೆ ಅದರಲ್ಲಿ ಜಾತಿಗಣತಿ ಸಹ ಒಂದು. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ವೀರಶೈವ ಲಿಂಗಾಯತ ಮತ್ತು ಎಲ್ಲಾ ಒಳಪಂಗಡಗಳ ಸೇರಿಸುವ ಬೇಡಿಕೆ ಪ್ರಮುಖ ಅಜೆಂಡಾ. ಸಮಾಜ ಜಾಗೃತಿ ಮತ್ತು ಸಂಘಟನೆ ಮಾಡಲು ಏನು ಬೇಕು ಅದರ ಬಗ್ಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸಾಮಾಜಿಕ ಸಮೀಕ್ಷೆ ಉದ್ದೇಶದಿಂದ ಜಾತಿಗಣತಿ ಮಾಡಲಾಯಿತು. ಆದರೆ ಗಣತಿ ಬಗ್ಗೆ ಅಂಕಿ ಸಂಖ್ಯೆಗಳ ಬಗ್ಗೆ ಕೆಲವೊಂದು ವಿಚಾರ ಲಿಕ್ ಆಗಿ ವಿವಾದ ಆಗಿದೆ. ಹೀಗಾಗಿ ಸಿಎಂ ಎಲ್ಲಾ ಸಮುದಾಯದ ನಾಯಕರ ಸಭೆ ಕರೆದು ಮಾತನಾಡೋದು ಉತ್ತಮ ಎಂದು ಶೆಟ್ಟರ್ ಅಭಿಪ್ರಾಯ ಪಟ್ಟಿದ್ದಾರೆ.
ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರಿಗೆ ವಯಸ್ಸಿನ ಕಾರಣ ಹೇಳಿ ರಾಮಮಂದಿರ ಲೋಕಾರ್ಪಣೆಗೆ ದೂರವಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ವಯಸ್ಸಿನ ಮತ್ತು ಆರೋಗ್ಯದ ದೃಷ್ಟಿಯಿಂದ ಆಹ್ವಾನ ನೀಡಿದಿರುವುದು ಸರಿಯಲ್ಲಾ. ಅದನ್ನು ಅವರು ಹೇಳುತ್ತಾರೆ. ನನಗೆ ಆರೋಗ್ಯ ಸರಿಯಿಲ್ಲ, ವಯಸ್ಸಾಗಿದೆ ಅಂತ. ರಾಮಮಂದಿರ ಬಗ್ಗೆ ಇಡೀ ರಾಷ್ಟ್ರದಲ್ಲಿ ಜಾಗೃತಿ ಮೂಡಿಸಿದ್ದು ಲಾಲಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ. ಈ ಸಮಯದಲ್ಲಿ ಇವರ ಉಪಸ್ಥಿತಿ ಬಹಳಷ್ಟು ಪ್ರಮುಖ. ಇವರನ್ನು ನಿರ್ಲಕ್ಷ್ಯ ಮಾಡಿದ್ದು, ದೂರಯಿಟ್ಟಿದ್ದು ಸರಿಯಲ್ಲಾ. ವಯಸ್ಸಿನ ನೆಪ ಹೇಳಿ ಈಗಾಗಲೇ ಅಡ್ವಾಣಿಯವರನ್ನು ಮೂಲೆಗುಂಪು ಮಾಡಲಾಗಿದೆ. ಹೊಸದಾಗಿ ಮೂಲೆಗುಂಪು ಮಾಡೋದು ಏನಿದೆ ಎಂದು ಶೆಟ್ಟರ್ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಲೋಕಸಭೆಗೆ ನಾನು ನಿಲ್ಲುತ್ತೇನೆ ಅಂತ ಎಲ್ಲಿಯೂ ಹೇಳಿಲ್ಲ. ಜೋಶಿಯವರು ಸಿಟ್ಟಿಂಗ್ ಎಂಪಿ ಅವರು ನಿಲ್ಲಲೇಬೇಕು. ಕಾಂಗ್ರೆಸ್ ಹೈಕಮಾಂಡ್ ನನ್ನ ಜೊತೆಗೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಧಾರವಾಡ ಲೋಕಸಭಾ ಕ್ಷೇತ್ರದ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಮತ್ತು ದೆಹಲಿಯಲ್ಲಿ ಯಾವುದೇ ಚರ್ಚೆ ಆಗಿಲ್ಲ. ನನ್ನ ಜೊತೆಗೆ ಮತ್ತು ಬೆಂಗಳೂರಿನಲ್ಲಿ ವಯಕ್ತಿಕವಾಗಿ ಗಂಭೀರವಾಗಿ ಚರ್ಚೆ ಮಾಡಿಲ್ಲ. ಇನ್ನೂ ಪ್ರಾರಂಭವಾಗಿಲ್ಲ ಈ ಸಮಯದಲ್ಲಿ ಚರ್ಚೆ ಅನಾವಶ್ಯಕ. ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿಯನ್ನು ಗಟ್ಟಿಸಿಗೊಳ್ಳಿಸುವ ಪ್ರಯತ್ನ ಮಾಡುವೆ. ಇಡೀ ರಾಜ್ಯದಲ್ಲಿ ಈ ಭಾರಿ 15 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲುತ್ತದೆ. ಇದರಲ್ಲಿ ಧಾರವಾಡ ಕೂಡ ಒಂದು ಎಂದು ಹೇಳಿದ್ದಾರೆ.
ವಿಧಾನ ಸಭಾ ಚುನಾವಣಾ ಫಲಿತಾಂಶ ಪರಿಣಾಮದಿಂದ ಮತ್ತೆ ಜಗದೀಶ್ ಶೆಟ್ಟರ್ ಟಾರ್ಗೆಟ್ ಆಗಿದ್ದಾರೆ. ಏನು ಪರಿಣಾಮ ಆಗಿದೆ ಅಂತ ಅವರು ಹೇಳಬೇಕು ನಾನು ನನ್ನ ಬಗ್ಗೆ ಮಾತನಾಡಲ್ಲ. ಒಬ್ಬ ವ್ಯಕ್ತಿ ಶಕ್ತಿ ಏನು ಅಂತ ಗೊತ್ತಾ ಅದು ಅರ್ಥವಾಗುತ್ತದೆ. ಬಿಜೆಪಿ ನಾಯಕರಿಗೆ ಮಾಜಿ ಸಚಿವ, ಶಾಸಕರಿಗೆ ಹಾಲಿ ಶಾಸಕರಿಗೆ ಜಗದೀಶ್ ಬಗ್ಗೆ ಅರ್ಥವಾಗಿದೆ. ಯಾವ ಬಿಜೆಪಿ ಹೈಕಮಾಂಡ್ ಇದುವರೆಗೆ ನನ್ನ ಜೊತೆಗೆ ಮಾತನಾಡಿಲ್ಲ. ಈಶ್ವರಪ್ಪ ಹೈಕಮಾಂಡ್ ಅಲ್ಲಾ ಅರ್ಥ ಇಲ್ಲದ ಪ್ರಶ್ನೆಗೆ ಉತ್ತರ ನೀಡಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.
ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು




