Thursday, December 4, 2025

Latest Posts

ಮಗ್ರಿಬ್ ಪ್ರಾರ್ಥನೆ ವೇಳೆ ಕಾಬೂಲ್‌ನ ಮಸೀದಿಯಲ್ಲಿ ಬಾಂಬ್ ಸ್ಫೋಟ : 21 ಜನರ ಸಾವು

- Advertisement -

International News:

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಖಚಿತಪಡಿಸಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದ್ದು, ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮಸೀದಿಯ ಇಮಾಮ್, ಮೌಲಾವಿ ಅಮೀರ್ ಮೊಹಮ್ಮದ್ ಕಾಬೂಲಿ ಕೂಡ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ.

 

ವಿಮಾನ ಪ್ರಯಾಣಿಕರಿಗೆ ಮಾಸ್ಕ್ – ಡಿಜಿಸಿಎ ಆದೇಶ

ಬಿಹಾರ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ ಹಂಚಿಕೆ ಗೊತ್ತಾ.? ಇಲ್ಲಿದೆ ಪಟ್ಟಿ

- Advertisement -

Latest Posts

Don't Miss