Saturday, November 15, 2025

Latest Posts

ಮದುವೆಯಾಗಿ 8 ತಿಂಗಳಷ್ಟೆ : ಪತ್ನಿ ಕಿರುಕುಳಕ್ಕೆ ಪತಿ ಆತ್ಮ*ಹತ್ಯೆ!

- Advertisement -

ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ. ಮೃತನನ್ನು ಗಗನ್ ರಾವ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಗಗನ್ ರಾವ್ ಅವರು ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು. ಸುಮಾರು ಎಂಟು ತಿಂಗಳ ಹಿಂದೆ ಮೇಘನ ಜಾದವ್ ಅವರೊಂದಿಗೆ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ದಾಂಪತ್ಯ ಜೀವನದಲ್ಲಿ ಕಲಹ ಆರಂಭವಾಗಿದ್ದು, ಪತ್ನಿಯ ನಿರಂತರ ಕಿರುಕುಳದಿಂದ ಬೇಸತ್ತ ಗಗನ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆತ್ಮಹತ್ಯೆಗೆ ಮುನ್ನ ದಂಪತಿಗಳ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಅದರ ಬಳಿಕ ಮನೆಯಲ್ಲಿ ಗಗನ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಯಿಂದ ಕುಟುಂಬ ಸದಸ್ಯರು ಹಾಗೂ ನೆರೆಹೊರೆಯವರು ಆಘಾತಕ್ಕೊಳಗಾಗಿದ್ದಾರೆ.

ಮೃತನ ತಂಗಿ ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪತ್ನಿಯೇ ಆತ್ಮಹತ್ಯೆಗೆ ಕಾರಣವೆಂದು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಾವಿನ ನಿಜವಾದ ಕಾರಣ ತನಿಖೆ ಬಳಿಕವೇ ತಿಳಿಯಲಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss