ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ ಜೀವನದಲ್ಲಿ ಬಹಳ ಮುಂದೆ ಸಾಗಬೇಕಿದೆ ಎಂದು ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ವಿಚ್ಛೇದನದ ಬಳಿಕ ನಟನಾ ಪ್ರಪಂಚಕ್ಕೆ ಮರಳಿದ್ದಾರೆ, ಡಿಸೆಂಬರ್ 6ರಂದು ಸಮಂತಾ ತಮ್ಮ ಹೊಸ ಚಿತ್ರ ಯಶೋಧ ಚಿತ್ರೀಕರಣವನ್ನು ಪುಣೆಯಲ್ಲಿ ಆರಂಭಿಸಿದ್ದಾರೆ ಈ ಚಿತ್ರವನ್ನು ಹರಿ ಮತ್ತು ಹರೀಶ್ ನಿರ್ದೇಶಿಸಲಿದ್ದು ತೆಲುಗು, ಮಲಯಾಳಂ, ಕನ್ನಡ, ಹಿಂದಿ, ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಲೇಖಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಹೊಸ ಚಿತ್ರದ ಪೋಸ್ಟರನ್ನು ಟ್ವಿಟರ್ ನಲ್ಲಿ ಹಾಕಿಕೊಂಡಿದ್ದು , ಹೊಸ ಚಿತ್ರಕ್ಕೆ ಆಶೀರ್ವದಿಸಬೇಕು ಎಂದು ಬರೆದುಕೊಂಡಿದ್ದಾರೆ.