Political News: ಹುಬ್ಬಳ್ಳಿ: ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಂಎಲ್ಸಿ ಪ್ರದೀಪ್ ಶೆಟ್ಟರ್ ಫುಲ್ ಸೈಲೆಂಟ್ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರಗೆ ಹಾಕಿದ್ದರು.
ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿರುವ ಪ್ರದೀಪ್ ಶೆಟ್ಟರ್, ಈಗ ಫುಲ್ ಸೈಲೆಂಟ್ ಆಗಿದ್ದಾರೆ. ಹೈಕಮಾಂಡ್ ಪ್ರದೀಪ್ ಶೆಟ್ಟರ್ ಅವರ ಅಸಮಾಧಾನಕ್ಕೆ ಮುಲಾಮು ಹಚ್ಚುವಲ್ಲಿ ಯಶಸ್ವಿಯಾದಂತೆ ಕಾಣಿಸುತ್ತಿದೆ.
ಲಿಂಗಾಯತರಿಗೆ ಅನ್ಯಾಯ ಆಗಿದೆ ಅಂತ ಗುಡುಗಿದ್ದ ಪ್ರದೀಪ್ ಶೆಟ್ಟರ್, 15 ದಿನಗಳ ನಂತ್ರ ಎಲ್ಲವನ್ನೂ ಬಹಿರಂಗಪಡಿಸೋದಾಗಿ ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಹೈಕಮಾಂಡ್ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿತ್ತು.
ಈ ಹೇಳಿಕೆ ಬೆನ್ನಲ್ಲೇ ಪ್ರದೀಪ್ ಶೆಟ್ಟರ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದ ಹೈಕಮಾಂಡ್, ಬಿಗ್ ಆಫರ್ ನೀಡಿದೆ ಅಂತೆ. ಹಾಗಾಗಿಯೇ ಪ್ರದೀಪ್ ಶೆಟ್ಟರ್ ಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಅಥವಾ ಹಾವೇರಿಯಿಂದ ಟಿಕೆಟ್ ಕೊಡುವ ಭರವಸೆಯನ್ನು ಬಿಜೆಪಿ ಹೈಕಮಾಂಡ್ ನೀಡಿ, ಪಕ್ಷದ ವಿರುದ್ಧ ಮಾತನಾಡದಂತೆ ಹೇಳಿ ಕಳುಹಿಸಿದೆ ಎಂದು ಹೇಳಲಾಗುತ್ತಿದೆ.
ದೆಹಲಿಯಿಂದ ಬಂದ ಕೂಡಲೇ ಪಕ್ಷದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಪ್ರದೀಪ್ ಶೆಟ್ಟರ್ ನಮ್ಮಲ್ಲಿ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ತೊರೆದ ನಂತರ ಬಿಜೆಪಿಗೆ ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿತ್ತು. ಈ ಹಿನ್ನೆಲೆ ಅಲರ್ಟ್ ಆದ ಹೈಕಮಾಂಡ್ ಬಂಡಾಯ ಶಮನ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಿದೆ.
ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 31ನೇ ಶ್ರದ್ಧಾಂಜಲಿ ಕಾರ್ಯಕ್ರಮ