ಕರ್ನಾಟಕದಲ್ಲಿ ಮಳೆ ಇನ್ನೂ ತೀವ್ರವಾಗಿದೆ. ಅಕ್ಟೋಬರ್ 14 ಮಂಗಳವಾರದ ಬಳಿಕ ರಾಜ್ಯದ ಬಹುಭಾಗದಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ 2025ರ ಭಾರಿ ಮಳೆಯಾಗಿದ್ದು, ರೈತರು ಬೆಳೆ ನಷ್ಟದಿಂದ ಪರದಾಡುತ್ತಿದ್ದಾರೆ.
ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಭಾಗ, ಕರ್ನಾಟಕದ ಕರಾವಳಿ ಪ್ರದೇಶ ಸೇರಿದಂತೆ ಇಡೀ ಕರ್ನಾಟಕದಲ್ಲಿ 2025 ಭರ್ಜರಿಯಾಗಿದೆ. ಮುಂಗಾರು ಮಳೆಯ ಅಬ್ಬರ ಕಂಡಿರುವ ಜನ ಈಗ ಮಳೆ ನಿಂತರೆ ಸಾಕು ಅಂತಾ ಪರದಾಡುತ್ತಿದ್ದಾರೆ. ಹೀಗಿದ್ದರೂ ಮಳೆ ಮಾತ್ರ ತನ್ನ ಆರ್ಭಟ ಕಡಿಮೆ ಮಾಡದೆ ಭರ್ಜರಿಯಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಮಳೆ ಹೆಚ್ಚಾದ ಕಾರಣ ಮತ್ತೊಮ್ಮೆ ನೆರೆ ಭಯ ಕಾಡುತ್ತಿದೆ.
ಇದರ ಜೊತೆ ಬೆಳೆ ಕೂಡ ಅಕಾಲಿಕ ಮಳೆ ಜೊತೆಗೆ ಕೊಚ್ಚಿಕೊಂಡು ಹೋಗುವ ಭಯ ಕಾಡುತ್ತಿದೆ. ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗುವ ಮುನ್ಸೂಚನೆ ಇದೆ? ಹವಾಮಾನ ಇಲಾಖೆ ಅಕ್ಟೋಬರ್ 14–15 ರವರೆಗೆ ಕೆಲವು ಜಿಲ್ಲೆಗಳಲ್ಲಿ ಮಳೆಯ ನಿರಂತರತೆಗೆ ಮುನ್ಸೂಚನೆ ನೀಡಿದ್ದು, ಇದರಿಂದ ನೆರೆ ಮತ್ತು ಭೂ ಕುಸಿತದ ಸಂಭವ ಹೆಚ್ಚಾಗಿದೆ.
ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಈ 14 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ.
ಈ ಪ್ರದೇಶಗಳಲ್ಲಿ 10 ಮಿ.ಮೀ. ರಿಂದ 30 ಮಿ.ಮೀ.ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆ ಭೂ ಕುಸಿತ ಮತ್ತು ರಸ್ತೆ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡಿದೆ.ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ರೈತರು ಹಾಗೂ ಸಾಮಾನ್ಯ ಜನರು ಸುರಕ್ಷಿತ ವ್ಯವಸ್ಥೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ವರದಿ : ಲಾವಣ್ಯ ಅನಿಗೋಳ