ರಾಜ್ಯದಲ್ಲಿ ಮೀಸಲಾತಿ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದೆ. ಇತ್ತೀಚೆಗೆ SC ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಉಂಟಾದ ವಿವಾದಗಳು ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಮುದಾಯವಾದ ‘ಕುರುಬ ಸಮುದಾಯ’ವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರ್ಪಡಿಸುವ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ಈಗಾಗಲೇ ಪರಿಶಿಷ್ಟ ಜಾತಿಯ ಮೀಸಲಾತಿ ಪರಿಷ್ಕರಣೆಯನ್ನು ಮಾಡಿ ಮುಗಿಸಿದೆ. ಪರಿಶಿಷ್ಟ ಜಾತಿಯ ಎಲ್ಲ 101 ಜಾತಿಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿ, ಒಳ ಮೀಸಲಾತಿ ನೀಡಿದೆ. ಆದ್ರೆ, ಇದಕ್ಕೆ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಮಾತ್ರ ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ.
ಈ ಕುರಿತು ರಾಜ್ಯ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳು ಸೆಪ್ಟೆಂಬರ್ 16ರಂದು ಬೆಂಗಳೂರು ಬಹುಕಟ್ಟಡದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಗೆ ಸಂಬಂಧಿಸಿದ ಸೂಚನಾ ಪತ್ರವನ್ನು ಇಲಾಖೆಯ ಉನ್ನತಾಧಿಕಾರಿಗಳಿಗೆ ಈಗಾಗಲೇ ಕಳುಹಿಸಲಾಗಿದೆ.
ಇನ್ನು ಸಭೆಯ ಮುಖ್ಯ ಅಜೆಂಡಾ ಏನಂದ್ರೆ ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಕುರಿತ ಚರ್ಚೆ ನಡೆಸುವ ಕುರಿತು ಉಲ್ಲೇಖವಾಗಿದೆ. ಮತ್ತು ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಕುರುಬ ಸಮುದಾಯವು ಕರ್ನಾಟಕದ ಗೊಂಡ ಸಮುದಾಯದ ಜೊತೆ ಸಾಮ್ಯತೆ ಹೊಂದಿರುವ ಬಗ್ಗೆ ಸೇರ್ಪಡೆಯ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಉಲ್ಲೇಖಿಸಲಾಗಿದೆ.
ಇದಕ್ಕೂ ಮುಂಚೆ ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಭಾರೀ ಹೋರಾಟ ನಡೆದಿತ್ತು.ಆದರೆ ಆಗಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ತಾತ್ಸಾರ ತೋರಿದರೆಂದು ಕೆಲವರು ಟೀಕಿಸಿದ್ದರು. ಆದರೆ ಈಗ ಅವರು ತಮ್ಮ ಸಮುದಾಯದ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ಆರಂಭಿಸಿದ್ದು, ಕುರುಬ ಸಮುದಾಯದ ಜನತೆಗೂ ಸಂತಸದ ಸುದ್ದಿ ಆಗಿದೆ.
ವರದಿ : ಲಾವಣ್ಯ ಅನಿಗೋಳ