ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ.
ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್ಫಾಸ್ಟ್ ಮೀಟಿಂಗ್ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ ಮಧ್ಯಾಹ್ನವೇ ದೆಹಲಿಗೆ ತೆರಳಿದ್ದಾರೆ.
ಇಂದು ಮಧ್ಯಾಹ್ನ ಡಿಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸುವ ಸಾಧ್ಯತೆ ಹೆಚ್ಚು ಎಂದು ಪಕ್ಷ ವಲಯದಿಂದ ತಿಳಿದುಬಂದಿದೆ. ನಾಳೆ ಹೈಕಮಾಂಡ್ ವರಿಷ್ಠರೊಂದಿಗೆ ನಡೆಯಲಿರುವ ಮಹತ್ವದ ಸಭೆಯ ಹಿನ್ನೆಲೆಯಲ್ಲಿ ಡಿಕೆಶಿ 1 ದಿನ ಮುಂಚಿತವಾಗಿಯೇ ದೆಹಲಿಗೆ ತೆರಳುವ ಸಾಧ್ಯತೆ ಕೂಡ ವ್ಯಕ್ತವಾಗಿದೆ.
ಸಿದ್ದರಾಮಯ್ಯ ಕೂಡ ಇದೇ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುವ ನಿರೀಕ್ಷೆ ವ್ಯಕ್ತವಾಗಿದ್ದು, ಇಬ್ಬರು ನಾಯಕರ ರಾಜಧಾನಿ ಭೇಟಿ ರಾಜ್ಯ ರಾಜಕೀಯಕ್ಕೆ ಮತ್ತಷ್ಟು ತೀವ್ರತೆ ತಂದಿದೆ.
ವರದಿ : ಲಾವಣ್ಯ ಅನಿಗೋಳ

