Saturday, April 12, 2025

Latest Posts

ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ: ಸಿಎಂ

- Advertisement -

Political News: ಸಿಎಂ ಸಿದ್ದರಾಮಯ್ಯನವರು, ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ತಿಳಿಸಿದ್ದಾರೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡಹೆಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಧಾನಿ
ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಸಿಎಂ ಹೇಳಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ. ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.
ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ “ಗ್ಯಾರಂಟಿ, ವಾರೆಂಟಿ” ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಯುಗಾದಿ ನಂತರ‌ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ

ವಿದ್ಯಾರ್ಥಿನಿಯರ ರೀಲ್ಸ್‌ಗೆ ಕಾಮೆಂಟ್ ಮಾಡಿ ಅಚ್ಚರಿ ಮೂಡಿಸಿದ ನಟ ವಿಜಯ್ ದೇವರಕೊಂಡ

ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪತ್ನಿ ರಿವಾಬಾಗೆ ಅರ್ಪಿಸಿದ ರವೀಂದ್ರ ಜಡೇಜಾ..

- Advertisement -

Latest Posts

Don't Miss