ಅಗ್ನಿಪಥ್ ವಯೋಮಿತಿ 23ಕ್ಕೆ ಏರಿಕೆ: ಜನರ ಅಗತ್ಯತೆಗಳಿಗೆ ಮೋದಿ ಸರ್ಕಾರ ಸ್ಪಂದನೆ – ಸಿಎಂ ಬೊಮ್ಮಾಯಿ

ಬೆಂಗಳೂರು: ಅಗ್ನಿಪಥ ಯೋಜನೆಯಡಿ ವಯೋಮಿತಿಯನ್ನು 21 ರಿಂದ 23 ಕ್ಕೆ ಏರಿಸುವ ಮೂಲಕ ಮೋದಿ ಸರ್ಕಾರವು ಜನರ ಅಗತ್ಯಗಳಿಗೆ ಸ್ಪಂದಿಸುವ ಸರ್ಕಾರ ಎಂದು ನಿರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ರಕ್ಷಣಾ ಪಡೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಮೊದಲ ವರ್ಷದ ನೇಮಕಾತಿಯಲ್ಲಿ ವಯೋಮಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚಿಸಿದ್ದಾರೆ. ಈ ನಿರ್ಧಾರದಿಂದ ದೊಡ್ಡ ಸಂಖ್ಯೆಯಲ್ಲಿ ಯುವ ಜನರಿಗೆ ಪ್ರಯೋಜನವಾಗಲಿದೆ. ತಾಯ್ನಾಡಿನ ಸೇವೆಯ ಪಥದಲ್ಲಿ ಯಶಸ್ವಿಯಾಗಿ ನಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲಿದ್ದಾರೆ. ದೇಶದ ಯುವಜನರ ಪರವಾಗಿ ಪ್ರಧಾನಮಂತ್ರಿಗಳಿಗೆ ಟ್ವೀಟ್ ಮೂಲಕ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ತಿಳಿಸಿದ್ದಾರೆ.

About The Author