ಸಿಕಂದರಾಬಾದ್: ಬಿಹಾರ, ಉತ್ತರ ಪ್ರದೇಶ ಮತ್ತು ಹರಿಯಾಣದ ನಂತ್ರ, ತೆಲಂಗಾಣದಲ್ಲಿಯೂ ಅಗ್ನಿಪಥ್ ಯೋಜನೆ ವಿರೋಧಿಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಕಂದರಾಬಾದ್ ನ ರೈಲ್ವೆ ನಿಲ್ದಾಣದಲ್ಲಿ ರೈಲುಗಳಿಗೂ ಪ್ರತಿಭಟನಾ ನಿರತ ಯುವಕರು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಪ್ರತಿಭಟನಾ ನಿರತರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮ, ಓರ್ವ ಸಾವನ್ನಪ್ಪಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಅಗ್ನಿಪಥ್ ಯೋಜನೆಯ ವಿರುದ್ಧದ ಪ್ರತಿಭಟನೆಗಳು ದೊಡ್ಡ ಪ್ರಮಾಣದ ಹಿಂಸಾಚಾರ ಮತ್ತು ಬೆಂಕಿಗೆ ಆಹುತಿಯಾದಾಗ ತೆಲಂಗಾಣ ಪೊಲೀಸರು ಜನಸಮೂಹದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಗುಂಡಿಗೆ ಓರ್ವ ಪ್ರತಿಭಟನಾ ನಿರತ ಸಾವನ್ನಪ್ಪಿದ್ದರೇ, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಇನ್ನೂ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಇರೋ ಕಾರಣ, ಈ ಮಾರ್ಗದಲ್ಲಿ ಸಂಚರಿಸಬೇಕಿದ್ದಂತ ರೈಲುಗಳ ಸಂಚಾರವನ್ನು ಬದಲಾವಣೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ನಿರತರಾಗಿದ್ದಂತ 250ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿಯವರೆಗೆ ಹಲವು ರೈಲುಗಳ ಸಂಚಾರವನ್ನು ರದ್ದು ಪಡಿಸಲಾಗಿದೆ.




