Wednesday, April 16, 2025

Latest Posts

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

- Advertisement -

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇನ್ನು ಈ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿದೆ.

ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳ ಪೈಕಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಮೀಸಲು ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಜವರಪ್ಪ ಮತ್ತು ಧನಂಜಯ್ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ 10 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜನ ಸಾಧಿಸಿದ್ದರು.

ಸಾಲಗಾರರಲ್ಲದ ಕ್ಷೇತ್ರದ ಒಟ್ಟು 444 ಮಂದಿ ಮತದಾರರ ಪೈಕಿ 426 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು. ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್, 260 ಮತ ಪಡೆದು ಗೆಲುವು ಸಾಧಿಸಿದೆ, ಜೆಡಿಎಸ್ ಬೆಂಬಲಿತ ರಾಮು 160 ಮತ ಪಡೆದು ಪರಾಭವಗೊಂಡರು. ಅದರಲ್ಲೂ 3 ಮತಗಳು ತಿರಸ್ಕೃತಗೊಂಡಿದ್ದವು.

ತಮ್ಮ ಗೆಲುವನ್ನು ಕುರಿತು ಪ್ರತಿಕ್ರಿಯಿಸಿರುವ ಸಚಿನ್, ಸಂಘದಲ್ಲಿ ಸದಸ್ಯತ್ವ ಹೊಂದಿರುವ ಬ್ರಹ್ಮದೇವರಹಳ್ಳಿ ಮತ್ತು ಮಣ್ಣಹಳ್ಳಿ ಗ್ರಾಮಪಂಚಾಯತ್ ವ್ಯಾಪ್ತಿಗಳ ಗ್ರಾಮಗಳ ಮತದಾರರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಹೋರಾಟ, ಬೆಂಬಲ ಮತ್ತು ಆಶೀರ್ವಾದದಿಂದ ಮೊದಲ ಚುನಾವಣೆಯಲ್ಲಿ ಗೆದ್ದು ಮೊದಲ ಮೆಟ್ಟಿಲಿನಲ್ಲಿಯೇ ಯಶಸ್ಸು ಕಂಡಿದ್ದೇವೆ. ಇದು ನನ್ನ ಗೆಲುವಲ್ಲ ಜನರ ಗೆಲುವು. ಜನರ ನಂಬಿಕೆ ವಿಶ್ವಾಸಕ್ಕೆ ಕಳಂಕ ಬಾರದಂತೆ ಸಂಘದ ಮೂಲಕ ಸದಸ್ಯರಿಗೆ ಸಿಗಬಹುದಾದ ಎಲ್ಲಾ ಬಗೆಯ ಸಾಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

- Advertisement -

Latest Posts

Don't Miss