ಮಂಡ್ಯದ ಕೃಷಿ ಮಹಾವಿದ್ಯಾಲಯ, ವಿ.ಸಿ.ಫಾರಂ ವತಿಯಿಂದ ಅಂತಿಮ ವರ್ಷದ ಬಿ.ಎಸ್ಸಿ (ಆನ್ಸರ್ಸ್) ಕೃಷಿ ಹಾಗೂ ಡಿಪ್ಲೋಮಾ (ಕೃಷಿ) ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ಕೃಷಿ ವಸ್ತು ಪ್ರದರ್ಶನವನ್ನು ಮಂಡ್ಯ ಜಿಲ್ಲೆಯ ಮಾರಗೌಡನ ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದಲ್ಲಿ ನವೆಂಬರ್.9 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಗರುಡ ಪುರಾಣದ ಪ್ರಕಾರ ಈ 9 ಕೆಲಸ ಮಾಡುವವರು ಯಾವಾಗಲೂ ಸುಖಿಯಾಗಿರುತ್ತಾರೆ- ಭಾಗ 2
ಕಾರ್ಯಕ್ರಮವನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಎಸ್.ವಿ ಸುರೇಶ ಉದ್ಘಾಟನೆ ಮಾಡಲಿದ್ದಾರೆ. ಕೃಷಿ ಮಹಾವಿದ್ಯಾಲಯದ ಡೀನ್ ಎಸ್.ಎಸ್ ಪ್ರಕಾಶ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಆರೋಗ್ಯ ಮತ್ತು ಅಡುಗೆ ಸಲಹೆಗಳು..ಭಾಗ -1
ಮುಖ್ಯ ಅತಿಥಿಗಳಾಗಿ ಕೃಷಿ ವಿಶ್ವವಿದ್ಯಾನಿಲಯ, ಶಿಕ್ಷಣ ನಿರ್ದೇಶಕರಾದ ಡಾ.ಕೆ.ಸಿ ನಾರಾಯಣಸ್ವಾಮಿ, ಕೃಷಿ ವಿಶ್ವವಿದ್ಯಾನಿಲಯ ಸಂಶೋಧನಾ ನಿರ್ದೇಶಕರಾದ ಡಾ. ಕೆ.ಬಿ ಉಮೇಶ್, ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ.ಕೆ ನಾರಾಯಣಗೌಡ, ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಡಾ. ವಿ.ಎಸ್ ಅಶೋಕ್ ರವರು ಭಾಗವಹಿಸಲಿದ್ದಾರೆ.