Thursday, June 19, 2025

Latest Posts

ನಾವು ಒಂದಾಗಿ, ಜಗತ್ತಿಗೆ ಸಾಮೂಹಿಕ ಸಂಕಲ್ಪ ತೋರಿಸೋಣ : ವಿಶೇಷ ಅಧಿವೇಶನಕ್ಕೆ ಖರ್ಗೆ, ರಾಹುಲ್‌ ಆಗ್ರಹ..

- Advertisement -

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರರ ದಾಳಿಯನ್ನು ಖಂಡಿಸುವ ಸಲುವಾಗಿ ಹಾಗೂ ದೇಶದ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್‌ ಗಾಂಧಿ ಒತ್ತಾಯಿಸಿದ್ದಾರೆ.

ಸಾಮೂಹಿಕ ಸಂಕಲ್ಪ. ಇಚ್ಚಾಶಕ್ತಿ ಬೇಕು..!

ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಕಾಂಗ್ರೆಸ್‌ನ ಉಭಯ ನಾಯಕರು ದೇಶದ ಹಿತದೃಷ್ಟಿಯಿಂದ ಸಂಸತ್‌ನ ಎರಡೂ ಮನೆಗಳ ವಿಶೇಷ ಅಧಿವೇಶ ನಡೆಸುವಂತೆ ಅಗ್ರಹಿಸಿದ್ದಾರೆ. ಏಕತೆ ಮತ್ತು ಒಗ್ಗಟ್ಟು ಪ್ರಮುಖವಾಗಿರುವ ಈ ಸಮಯದಲ್ಲಿ, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯುವುದು ಮುಖ್ಯ ಎಂಬುವುದು ವಿರೋಧ ಪಕ್ಷಗಳ ಅಭಿಪ್ರಾಯ. ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಮುಗ್ಧ ನಾಗರಿಕರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪ ಮತ್ತು ಇಚ್ಛಾಶಕ್ತಿ ಮುಖ್ಯ. ಹಾಗಾಗಿ ಆದಷ್ಟು ಬೇಗ ವಿಶೇಷ ಅಧಿವೇಶ ಕರೆಯಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಖರ್ಗೆ ತಮ್ಮ ಪತ್ರದಲ್ಲಿ ಉಲ್ಲೇಖಿಸುವ ಮೂಲಕ ಪ್ರಧಾನಿಯವರನ್ನು ಕೋರಿದ್ದಾರೆ.

ಒಂದಾಗಿ ನಿಂತಿರುವುದನ್ನು ಜಗತ್ತಿಗೆ ತೋರಿಸಬೇಕಿದೆ..

ಇನ್ನೂ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ. ಈ ನಿರ್ಣಾಯಕ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಟ್ಟಾಗಿ ನಿಲ್ಲುತ್ತೇವೆ ಎಂದು ಭಾರತ ತೋರಿಸಬೇಕಿದೆ. 2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿಗಳಲ್ಲಿ ಇದು ಒಂದಾಗಿದೆ ಎಂದು ರಾಹುಲ್‌ ಗಾಂಧಿ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರಬೇಕಿದೆ..

ಅಲ್ಲದೆ ಖ್ಯಾತ ವಕೀಲ ಹಾಗೂ ರಾಜ್ಯ ಸಭಾ ಸಂಸದ ಕಪಿಲ್ ಸಿಬಲ್ ಅವರು, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಇಡೀ ಜಗತ್ತಿಗೆ ಒಗ್ಗಟ್ಟಿನ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದು ನಿರ್ಣಯ ಅಂಗೀಕರಿಸಬೇಕೆಂದು ಆಗ್ರಹಿಸಿದ್ದಾರೆ. ಸರ್ಕಾರದ ಜೊತೆಗೆ ವಿಪಕ್ಷಗಳ ಸಂಸದರ ನಿಯೋಗಗಳನ್ನು ವಿವಿಧ ದೇಶಗಳಿಗೆ ಕಳುಹಿಸಿ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರಬೇಕು. ಅಲ್ಲದೆ ಅಮೆರಿಕ ನಿರ್ಬಂಧ ವಿಧಿಸುವಂತೆಯೇ ಪಾಕಿಸ್ತಾನದೊಂದಿಗೆ ವ್ಯಾಪಾರ ಹೊಂದಿರುವ, ಅದನ್ನು ಬೆಂಬಲಿಸುವ ಎಲ್ಲ ಪ್ರಮುಖ ರಾಷ್ಟ್ರಗಳಿಗೂ ನಮ್ಮ ಮಾರುಕಟ್ಟೆಗೆ ಬರಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶ ರವಾನಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಈ ದಾಳಿ ಕೇವಲ ಪ್ರವಾಸಿಗರ ಮೇಲೆ ಆಗಿಲ್ಲ, ಬದಲಿಗೆ ಭಾರತದ ಸಾರ್ವಭೌಮತ್ವದ ಮೇಲಿನ ದಾಳಿ ಆಗಿರುವುದರಿಂದ ಇಡೀ ದೇಶವು ನಿಮ್ಮೊಂದಿಗೆ ಇದೆ. ಈ ಕ್ಷಣದಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ಕರೆದು ಈ ಕುರಿತು ಚರ್ಚೆ ನಡೆಸುವಂತೆ ಪ್ರಧಾನಿ ಅವರಿಗೆ ಸೂಚಿಸಲು ಬಯಸುತ್ತೇನೆ. ಇಡೀ ದೇಶವೇ ಒಗ್ಗಟ್ಟಾಗಿದ್ದು, ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಭಾವನೆಯನ್ನು ವಿಶ್ವದ ಮುಂದೆ ವ್ಯಕ್ತಪಡಿಸಲು ಸಂಸತ್ತಿನಲ್ಲಿ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಬೇಕು ಎಂದು ಸಿಬಲ್‌ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ರಾಷ್ಟ್ರಪತಿಗಳ ಗ್ರೀನ್‌ ಸಿಗ್ನಲ್‌ ಬಳಿಕ ಅಧಿವೇಶನ..

ಇನ್ನೂ ಈಗಾಗಲೇ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯು ಈ ದಾಳಿಯ ಹಿನ್ನೆಲೆ ವಿಶೇಷ ಅಧಿವೇಶನ ಕರದು ಖಂಡನಾ ನಿರ್ಣಯ ಅಂಗೀಕರಿಸಿದೆ. ಅಲ್ಲದೆ ಕೇಂದ್ರ ಸರ್ಕಾರ ಭಯೋತ್ಪಾದನೆ ವಿರುದ್ಧ ಯುದ್ಧ ಸಾರಿದ್ದು, ಪ್ರತಿಪಕ್ಷಗಳು ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಇದೀಗ ವಿಶೇಷ ಅಧಿವೇಶನ ಕರೆದು ನಿರ್ಣಯವನ್ನು ಅಂಗೀಕರಿಸಿದರೆ, ಅದು ಪಾಕಿಸ್ತಾನ ಹಾಗೂ ಉಗ್ರ ಸಂಘಟನೆಗಳಿಗೆ ದೊಡ್ಡ ಹೊಡೆತ ನೀಡಿದಂತಾಗುತ್ತದೆ.

ಈ ಕುರಿತು ರಾಷ್ಟ್ರಪತಿ ದೌಪದಿ ಮುರ್ಮು ಅವರೊಂದಿಗೆ ಚರ್ಚೆ ನಡೆಸಿ ಕೇಂದ್ರ ಸರ್ಕಾರವು ವಿಶೇಷ ಅಧಿವೇಶನದ ಬಗ್ಗೆ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಈಗಾಗಲೇ ಪಾಕಿಸ್ತಾನದ ಭಯೋತ್ಪಾದನೆಯನ್ನು ಮಟ್ಟ ಹಾಕಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ಗೃಹ ಹಾಗೂ ರಕ್ಷಣಾ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಹೈ ವೋಲ್ಟೇಜ್‌ ಸರಣಿ ಸಭೆಗಳನ್ನು ಮಾಡಿದ್ದಾರೆ. ಅದರಲ್ಲಿ ಸ್ಪಷ್ಟವಾಗಿ ರಣಹೇಡಿ ಪಾಕಿಗಳ ಹೆಡೆ ಮುರಿ ಕಟ್ಟಲು ಎಲ್ಲ ರೀತಿಯ ತೀರ್ಮಾನಗಳನ್ನು ಕೈಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

- Advertisement -

Latest Posts

Don't Miss