- Advertisement -
www.karnatakatv.net :ರಾಯಚೂರು: ಮೈಸೂರು MBA ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ AIDSO, SFI ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘಟನೆಕಾರರು ಹಾಗೂ ವಿದ್ಯಾರ್ಥಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸರ್ಕಾದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸಿ ಎಂದು ಆಗ್ರಹ ಪಡಿಸಿದ್ರು.
ಅತ್ಯಾಚಾರಿಗಳನ್ನು ಕೂಡಲೇ ಬಂಧಿಸಬೇಕು, ಜಸ್ಟೀಸ್ ವರ್ಮಾ ವರದಿ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಚಿತ್ರಗಳು ಹಾಗೂ ಸಿನಿಮಾಗಳು ಬ್ಯಾನ್ ಮಾಡಬೇಕೆಂದು ಆಗ್ರಹಿಸಿದರು.
ಅನೀಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು
- Advertisement -