Tuesday, October 15, 2024

Latest Posts

ರಾಹುಲ್ ಗಾಂಧಿ ಡೈರೆಕ್ಷನ್ ಇಲ್ಲದೇ ಇದೆಲ್ಲ ನಡೆಯಲು ಸಾಧ್ಯವಿಲ್ಲ: ಸಂಸದ ಜಗದೀಶ್ ಶೆಟ್ಟರ್

- Advertisement -

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಿಎಂ ದಸರಾ ಉದ್ಘಾಟನೆ ವಿಷಯವಾಗಿ ಪ್ರತಿಕ್ರಿಯಿಸಿದ್ದಾರೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು. ಬಂಡತನ ಇದ್ರೆ ಏನು ಮಾಡೋಕಾಗುತ್ತೆ..? ಸಿದ್ದರಾಮಯ್ಯ ಅವರು ಇನ್ಮೇಲಾದ್ರೂ ಅರ್ಥ ಮಾಡಿಕೊಳ್ಳಬೇಕು. ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಅಂತ ಹೇಳ್ಕೋತಾರೆ. ನೈತಿಕತೆ ಬಗ್ಗೆ ಮಾತನಾಡ್ತಿದ್ರು. ಯಡಿಯೂರಪ್ಪ ಅವರ ಮೇಲೆ ಎಫ್ಐಆರ್ ಆದಾಗ ಏನು ಮಾತಾಡಿದ್ದಾರೆ ಅಂತ ನೋಡಲಿ. ಎಲ್ಲಾ ಕೆಳಗಿನ ಅಧಿಕಾರಿಗಳು ಪ್ರಾಮಾಣಿಕವಾಗಿ ಹೇಗೆ ತನಿಖೆ ಮಾಡೋಕೆ ಆಗುತ್ತೆ. ಅದಕ್ಕೆ ರಾಜೀನಾಮೆ ಕೊಡ್ಬೇಕು ಎಂದಿದ್ದ ಸಿದ್ದರಾಮಯ್ಯ ಈಗೇಕೆ ರಾಜೀನಾಮೆ ಕೊಡ್ತಿಲ್ಲ..? ಅವರ ಹೇಳಿಕೆನೆ ಅವರು ನೋಡಿಕೊಳ್ಳಲಿ. ಅವರು ಪ್ರವಾಸ ಮಾಡಿದಲ್ಲಿ ಬೆಲೆನೇ ಇಲ್ಲಾ ಎಂದು ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಸಿಎಂ ಆಗಲು ಮಹಾನ್ ನಾಯಕ ಸಾವಿರ ಕೋಟಿ ತೆಗೆದಿಟ್ಟಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕೊಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಶೆಟ್ಟರ್, ಯತ್ನಾಳರ ವೈಯಕ್ತಿಕ ಹೇಳಿಕೆಗೆ ನಾನು ಉತ್ತರಿಸಲ್ಲ. ಯತ್ನಾಳ್ ಹೇಳಿಕೆಗೆ ನಾನು ಕಾಮೆಂಟ್ ಮಾಡಲ್ಲ. ನಾನು ಯಾಕೆ ಅದರ ಬಗ್ಗೆ ಮಾತನಾಡಲಿ.? ಈ ನಿಟ್ಟಿನಲ್ಲಿ ಪಕ್ಷ ಅಗತ್ಯ ಕ್ರಮ ಕೈಗೊಳ್ಳುತ್ತೆ. ಅವರ ಹೇಳಿಕೆ ಅವರಿಗೇ ಸೀಮಿತ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ವರ್ಗಿಕರಣ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆದರೆ ಅದನ್ನು ವೈಜ್ಞಾನಿಕವಾಗಿ ವಿಭಾಗಿಸಬೇಕು. ಆಡಳಿತಯಂತ್ರ ಸರಿಯಾಗಿ ಇರಬೇಕೆಂದರೆ ಜಿಲ್ಲೆಗಳು, ತಾಲೂಕು ಚಿಕ್ಕ ಚಿಕ್ಕದಾಗಿರಬೇಕು. ಬೆಳಗಾವಿಯು ಇಬ್ಬಾಗವಾಗಿ ಪ್ರತ್ಯಕ್ಷ ಜಿಲ್ಲೆಗಳಾಗಬೇಕು. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ ಎಂದು ಶೆಟ್ಟರ್‌ ಹೇಳಿದ್ದಾರೆ.

ಐಪಿಎಸ್ ಅಧಿಕಾರಿ ಚಂದ್ರಶೇಖರ್‌ ಮತ್ತು ಕುಮಾರಸ್ವಾಮಿ ಮಧ್ಯೆ ಗಲಾಟೆ ವಿಚಾರ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶೆಟ್ಟರ್, ಅಧಿಕಾರಿಗಳು ರಾಜಕಾರಣಿಗಳಂತೆ ವರ್ತಿಸಬಾರದು. ಕುಮಾರಸ್ವಾಮಿ ಕೇಂದ್ರದ ಸಚಿವರು. ಮೋದಿ ಕ್ರಾಂಬಿನೆಟ್ ನಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ಹಿಂದಿನ ಯಾವುದೋ ಕೇಸ್ ನ ಎಫ್ಐಆರ್ ಇಟ್ಕೊಂಡು ಆಟವಾಡ್ತಿದ್ದಾರೆ. ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ಎಲ್ಲರ ಮೇಲೆ ಎಫ್ಐಆರ್ ಮಾಡ್ಸಿ ತೊಂದ್ರೆ ಕೊಡುವುದು ಆರಂಭ ಆಗಿದೆ. ಮುಡಾ ಹಗರಣದಲ್ಲಿ ಜನರ ಮೈಂಡ್ ಡೈವರ್ಟ್ ಮಾಡೋಕೆ ಪ್ರಯತ್ನಿಸುತ್ತಿದ್ದಾರೆ. ಕೇಂದ್ರ ಸಚಿವರ ಮೇಲೆ ಎಫ್ಐಆರ್ ಇದ್ರೆ ಪ್ರಾಮಾಣಿಕವಾಗಿ ತನಿಖೆ ಮಾಡಲಿ. ಕೇಂದ್ರ ಮಂತ್ರಿಗಳ ಮೇಲೆ ಅಧಿಕಾರಿ ಕೆಟ್ಟದಾಗಿ ಮಾತನಾಡ್ತಾರೆ. ಅವರ ಮಿತಿ ದಾಟಿ ಮಾತನಾಡ್ತಾ ಇದ್ದಾರೆ.
ಕಾಂಗ್ರೆಸ್ ಪಕ್ಷದ ಮಾರ್ಗದರ್ಶನದಲ್ಲಿ ಇದೆಲ್ಲ ನಡೀತಿದೆ. ಇದು ಸರಿಯಾದ ನಡೆ ಅಲ್ಲಾ ಎಂದು ಶೆಟ್ಟರ್ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರಕ್ಕೆ ಈ ಬಗ್ಗೆ ದೂರು ನೀಡಿದ್ದಾರೆ. ಪೊಲೀಸ್ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳೋದು ಅನಿವಾರ್ಯ ಆಗುತ್ತೆ. ಲೋಕಾಯುಕ್ತದವರು ಕುಮಾರಸ್ವಾಮಿ, ಯಡಿಯೂರಪ್ಪ ಅವರನ್ನ ಕರೆಸಿದ್ರು. ವಿಚಾರಣೆಗೆ ಇಬ್ಬರು ಹಾಜರಾಗಿ ಬಂದ್ರಲ್ಲ. ಅದನ್ನ ಬಿಟ್ಟು ಬೇಕಾಬಿಟ್ಟಿ ಮಾತನಾಡಿ, ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡ್ತಿದ್ದಾರೆ. ನಿರ್ಮಾಲಾ ಸೀತಾರಂ ಮೇಲೆ ನ್ಯಾಯಾಧೀಶರ ಸೂಚನೆ ಮೇಲೆ ಎಫ್ಐಆರ್ ಮಾಡಿದ್ದಾರೆ. ನ್ಯಾಯಾಧೀಶರ ಸೂಚನೆಗೆ ನಾನೇನು ಪ್ರತಿಕ್ರಿಯೆ ನೀಡಲ್ಲ. ಆದರೆ ಪೊಲೀಸರು ಸತ್ಯಕ್ಕೆ ಪರಿಶೀಲನೆ ಮಾಡದೆ ಎಫ್ ಐ ಆರ್ ದಾಖಲು ಮಾಡಿದ್ದಾರೆ. ಕೇಂದ್ರ ಮಂತ್ರಿ ಮೇಲೆ ಕ್ರಮ ಕೈಗೊಳ್ಳಬೇಕಾದರೆ ಪ್ರಾಸ್ಯೆಕ್ಯೂಷನ್ ಅಗತ್ಯವಲ್ಲವೇ..? ಎಲೆಕ್ಟ್ರೋಲ್ ಬಾಂಡ್ ದುಡ್ಡು ಕೊಟ್ಟವರು ಯಾರೂ ದೂರು ಕೊಟ್ಟಿಲ್ಲ.
ಕೇಂದ್ರ ಸರ್ಕಾರದಿಂದ ಅನ್ಯಾಯ ಆಗಿದೆ ಅಂತ ದೂರು ನೀಡಿದ್ದಾರಾ? ಟಾರ್ಗೆಟ್ ಮಾಡ್ತಿದ್ದಾರೆ ಅನ್ನೋದು ಇದರಿಂದ ಸ್ಪಷ್ಟ ಎಂದು ಶೆಟ್ಟರ್ ಹೇಳಿದ್ದಾರೆ.

ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಹೇಳಿದ್ರು ಅಂತ ದ್ವೇಷದ ರಾಜಕಾರಣ ಮಾಡೋದು ಸರಿಯಲ್ಲ.
ನಿರ್ಮಲಾ ಸೀತಾರಾಮ್ ಇದರಿಂದ ಬೆನಿಫಿಟ್ ಮಾಡಿಕೊಂಡಿದ್ದಾರಾ..? ಎಲೆಕ್ಟ್ರಾ ಬಾಂಡ್ ಮೂಲಕ ಕಾಂಗ್ರೆಸ್ ಪಕ್ಷಕ್ಕೂ ಹಣ ಹೋಗಿದೆ. ಬೇರೆ ಬೇರೆ ಪಕ್ಷಗಳಿಗೂ ಹಣ ಹೋಗಿದೆ. ಇಡಿ ಬಳಸಿ ಬ್ಲಾಕ್ ಮೇಲ್ ಮಾಡಿ ಹಣ ಪಡೆದಿದ್ದಾರೆ ಅನ್ನೋ ಆರೋಪ. ಯಾರು ಇಡಿ ಯಿಂದ ದಾಳಿ ಮಾಡಿಸಿಕೊಂಡವರು ಹೇಳಬೇಕಲ್ಲ. ಕೋರ್ಟ್ ತೀರ್ಪಿನ ಬಗ್ಗೆ ಕಾಮೆಂಟ್ ಮಾಡಲು ಹೋಗಲ್ಲ. ರಾಹುಲ್ ಗಾಂಧಿ ಡೈರೆಕ್ಷನ್ ಇಲ್ಲದೇ ಇದೆಲ್ಲ ನಡೆಯಲು ಸಾಧ್ಯವಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

- Advertisement -

Latest Posts

Don't Miss