Friday, July 11, 2025

Latest Posts

ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್

- Advertisement -

Hubballi News: ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ ಕೇಳಿಬಂದಿದ್ದು, ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆಂದು ಬೆದರಿಕೆ ಹಾಕಿರುವ ಆರೋಪದ ಹಿನ್ನಲೆ ಉದ್ಯಮಿ ವಿಜಯ ಅಳಗುಂಡಗಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.

ವ್ಯಾಪರಸ್ಥರಿಗೆ ಹೆದರಿಸಿ ಹಣಕ್ಕೆ ಬೇಡಿಕೆ
ಹೌದು, ನಗರದ ಬಟರ್‌ ಮಾರ್ಕೆಟ್‌, ಜವಳಿ ಸಾಲ, ಉಳ್ಳಾಗಡ್ಡಿ ಓಣಿ ವ್ಯಾಪಾರಸ್ಥರಿಗೆ ಹೆದರಿಸಿ 2 ಲಕ್ಷದಿಂದ 3 ಲಕ್ಷ ರೂ ಹಣ ವಸೂಲಿ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಅಕ್ಟೋಬರ್‌ 26ರಂದು ಉಳ್ಳಾಗಡ್ಡಿ ಮಠದ ಬಳಿಯ ನಿಖಿತಾ ಪ್ಲಾಸ್ಟಿಕ್‌ ಅಂಗಡಿ ಬಳಿ ವಿಜಯ ಅವರನ್ನು ಕರೆಸಿಕೊಂಡು ರಾಜ್ಯೋತ್ಸವಕ್ಕೆ 2 ಲಕ್ಷ ಕೊಡಬೇಕು. ಜೊತೆಗೆ ಪ್ರತಿ ಮೂರು ತಿಂಗಳಿಗೆ ನೀಡಬೇಕಾದ 1.70 ಲಕ್ಷ ರೂ ಹಣವನ್ನು ಕಡ್ಡಾಯವಾಗಿ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆಂದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ ಮಂಜುನಾಥ್ ಲೂತಿಮಠ, ರಾಹುಲ್‌, ಅಮಿತ್‌, ಪ್ರವೀಣ, ಬಸವರಾಜ, ಬಾಲು, ಪ್ರಕಾಶ್ ಮತ್ತು ವಿಜಯ ಅವರ ಹೆಸರನ್ನು ಸೇರಿಸಲಾಗಿದೆ.

ಕೋಲಾರದಲ್ಲಿ ಮತ್ತೆ ಹರಿದ ನೆತ್ತರು: 17 ವರ್ಷದ ಬಾಲಕನ ಭೀಕರ ಕೊಲೆ

ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?

ವೇತನ ಕೊಡದ ಟೋಲ್ ನಾಕಾ, ಲೇಬರ್ ಗುತ್ತಿಗೆದಾರ ಆತ್ಮಹತ್ಯೆ

- Advertisement -

Latest Posts

Don't Miss