Wednesday, April 16, 2025

Latest Posts

ಮರಿತಿಬ್ಬೇಗೌಡ ಸೇರಿ ಬಿಜೆಪಿ, ಜೆಡಿಎಸ್‌ನ ಹಲವರು ಕಾಂಗ್ರೆಸ್‌ಗೆ ಸೇರ್ಪಡೆ

- Advertisement -

Political News: ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಅಸಮಾಧಾನ ಹೊರಹಾಕಿದ್ದ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ, ಹಲವು ಜೆಡಿಎಸ್‌, ಬಿಜೆಪಿಗರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಜಾತ್ಯತೀತ ಸಿದ್ಧಾಂತಕ್ಕೆ ತಿಲಾಂಜಲಿ ಹಾಡಿದ ಜೆಡಿಎಸ್ ಪಕ್ಷದ ಬಗ್ಗೆ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಜತೆಗೆ ಮಳವಳ್ಳಿ, ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಪಕ್ಷದ ನಾನಾ ಮೋರ್ಚಾಗಳ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದ ವೇಳೆ ಹಾಜರಿದ್ದು, ಅವರೆಲ್ಲರನ್ನು ಪ್ರೀತಿಯಿಂದ ಪಕ್ಷಕ್ಕೆ ಬರಮಾಡಿಕೊಂಡು, ಶುಭ ಹಾರೈಸಿದೆ ಎಂದಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಕಾಂಗ್ರೆಸ್‌ ತತ್ವ, ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು ಹಾಗೂ ಜೆಡಿಎಸ್ ನಾಯಕರಾದ ಶ್ರೀ ಮರಿತ್ತಿಬ್ಬೆ ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಪ್ಪಾಜಿ ಗೌಡ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಶ್ರೀ ವೆಂಕಟೇಶ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀ ಯೋಗೇಶ್ ಹಾಗೂ ಬಿಜೆಪಿಯ ಮಾಜಿ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಆಶಾ ಸುರೇಶ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷ ಬಲವರ್ಧನೆಗೆ ಕೈ ಜೋಡಿಸುತ್ತಿರುವ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಶುಭ ಹಾರೈಸಿದೆ ಎಂದಿದ್ದಾರೆ.

ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ

ಅಳೆದು ತೂಗಿ ಅಸೂಟಿಗೆ ಲೋಕಸಭೆ ಟಿಕೆಟ್ – ರಾಜಕೀಯ ಹಿನ್ನೆಲೆ

ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ

- Advertisement -

Latest Posts

Don't Miss