ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ ಇದೆ ಎಂದು ಹೇಳಿದರು.
ಸಭೆಯಲ್ಲಿದ್ದ ಎಚ್.ಕೆ.ಪಾಟೀಲ್, ಸಭಾಪತಿ ಬಸವರಾಜ ಹೊರಟ್ಟಿ , ಶಿವಲಿಂಗೇಗೌಡರು, ಸೇರಿದಂತೆ ಹಲವು ಹಿರಿಯ ಸಚಿವರು ಹಾಗೂ ಶಾಸಕರುಗಳಿಗೆ ಕ್ಲಬ್ ಮಾಡುವ ವಿಚಾರವಾಗಿ ಇಷ್ಟವಿಲ್ಲ ಎಂಬುದು ಗೊತ್ತಾಗಿದೆ. ಸಭೆಯಲ್ಲಿ ಒಮ್ಮತದ ಅಭಿಪ್ರಾಯವಿಲ್ಲದಿದ್ದರೂ ಮನರಂಜನೆ ಕ್ಲಬ್ ಮಾಡುವ ದುಸ್ಸಾಹಸವೇಕೆ? ಇದರ ಹಿಂದೆ ಯಾರ ಒತ್ತಡವಿದೆ? ಎಂದು ಬ್ರಿಜೇಶ್ ಕಾಳಪ್ಪ ಪ್ರಶ್ನೆ ಮಾಡಿದರು.
ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಂವಹನ ವಿಭಾಗದ ಮುಖ್ಯಸ್ಥ ಬ್ರಿಜೇಶ್ ಕಾಳಪ್ಪ, ನಗರದ ಹೃದಯಭಾಗದಲ್ಲಿರುವ ಬಾಲಬ್ರೂಯಿ ಪಾರಂಪರಿಕ ಅತಿಥಿ ಗೃಹವನ್ನು ‘ಕಾನ್ಸ್‌ಟಿಟ್ಯೂಷನಲ್ ಕ್ಲಬ್’ಆಗಿ ಪರಿವರ್ತಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ರಾಷ್ಟ್ರದ ಮಹಾತ್ಮರು ನೆಲೆಸಿದ್ದ ಐತಿಹಾಸಿಕ ಅತಿಥಿಗೃಹವನ್ನು ಮೋಜು, ಮಸ್ತಿಗೆ ಬಳಕೆ ಮಾಡುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಷ ವ್ಯಕ್ತಪಡಿಸಿದರು.
DKS Question: ಶಾಸಕರು ನೋವು ಹೇಳಿಕೊಳ್ಳುವುದರಲ್ಲಿ ತಪ್ಪೇನಿದೆ?: ಡಿಸಿಎಂ ಶಿವಕುಮಾರ್ ಪ್ರಶ್ನೆ
ISRO: ಕಿರು ನಾಟಕದ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಶುಭ ಹಾರೈಸಿದ ಶಾಲಾ ಮಕ್ಕಳು:
DKS ಆಲಮಟ್ಟಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ: