Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ನಡೆದ ಬೆನ್ನಲ್ಲೇ ಅಲರ್ಟ್ ಆಗಿರುವ ಹಳೇ ಹುಬ್ಬಳ್ಳಿ ಹಾಗೂ ಕಸಬಾ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳು ರಾತ್ರೋ ರಾತ್ರಿ ಆನಂದ ನಗರದ ರಸ್ತೆ ಪಕ್ಕದಲ್ಲಿ ಕಲ್ಲಿಟ್ಟು ಅಂಬೇಡ್ಕರ್ ಮೂರ್ತಿ ಕೂರಿಸಿದ್ದಾರೆ. ಈ ನಿಟ್ಟಿನಲ್ಲಿ ಸುದ್ಧಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಇನ್ನೂ ನೀರಿನ ಟ್ಯಾಂಕ್ ಬಳಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಮೂರ್ತಿ ಇಟ್ಟು ಮಾಲೆ ಹಾಕಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಯಾವುದೇ ರೀತಿಯಲ್ಲಿ ಅಪಮಾನ ಆಗಬಾರದು ಎಂಬುವಂತ ಸದುದ್ದೇಶದಿಂದ ಪೊಲೀಸ್ ಅಧಿಕಾರಿಗಳು ಜಿಲ್ಲಾಡಳಿತದ ಗಮನಕ್ಕೆ ತಂದು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಚಿಂತನೆ ನಡೆಸಿದ್ದಾರೆ.
ಬಾಹ್ಯಾಕಾಶದಲ್ಲಿ ಸಿಲುಕಿದ ಸುನೀತಾ ವಿಲಿಯನ್ಸ್; ಬಾಹ್ಯಾಕಾಶದಲ್ಲಿ ಏನಾಗ್ತಿದೆ ಗೊತ್ತಾ?