- Advertisement -
Banglore News:
ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ.
ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯ 10ನೇ ಕ್ರಾಸ್ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
- Advertisement -