ಅಂತರಾಷ್ಟ್ರೀಯ ಸುದ್ದಿ: ಅಮೆರಿಕ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ದಂಪತಿ,ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು ಮನವಿ ಮಾಡಿದರು
ಈ ಕೇಂದ್ರವು ಹಲ್ಲೆಗೆರೆ, ಮಂಡ್ಯ ಜಿಲ್ಲೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ನಿಯೋಗದ ಸದಸ್ಯರು ಕೇಂದ್ರದ ಕಾರ್ಯ ಸ್ವರೂಪವನ್ನು ವಿವರಿಸಿದರು. ಮಾತ್ರವಲ್ಲ ಟ್ರಸ್ಟ್ ಮಾಡುತ್ತಿರುವ ಸಾಮಾಜಿಕ ಕಾರ್ಯವನ್ನು ವಿವರಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಅವರು, “ನೀವು ಮಾಡುವ ಒಳ್ಳೆಯ ಕಾರ್ಯಗಳಿಗೆ ನಿಮ್ಮ ಜತೆ ನಾವಿದ್ದೇವೆ. ಬೇಕಾದ ಎಲ್ಲ ಬೆಂಬಲ ನೀಡಲಿದ್ದೇವೆ. ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತೇನೆ” ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಶಾಸಕ ದಿನೇಶ ಗೂಳಿಗೌಡ, ಶಾಸಕರಾದ ರವಿಕುಮಾರ್ ಗಣಿಗ, ಬಾಬು ಬಂಡಿಸಿದ್ದೇಗೌಡ, ಅಮೆರಿಕದ ಅಕ್ಕ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಮುಂತಾದವರು ನಿಯೋಗದಲ್ಲಿದ್ದು, ಸಿಎಂಗೆ ವಿವರಣೆ ನೀಡಿದರು.
DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಂಶ ಪರಿಶೀಲಿಸಲಿ..!
Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ