www.karnatakatv.net:- ಅಂತರಾಷ್ಟ್ರೀಯ- ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಭಾರತಕ್ಕೆ ಅಮೆರಿಕಾ 200 ಬಿಲಿಯನ್ ಡಾಲರ್ ನೆರವು ಘೋಷಿಸಿದ್ದ ಅಮೆರಿಕಾ ಇದೀಗ ಹೆಚ್ಚುವರಿಯಾಗಿ 41 ಬಿಲಿಯನ್ ಡಾಲರ್ ನೆರವು ನೀಡಲು ಇಚ್ಛಿಸಿದೆ. ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಾಣಿಸಿಕೊಂಡ ಕೊರೊನಾ 2ನೇ ಅಲೆಗೆ ಭಾರತ ತತ್ತರಿಸಿ ಹೋಗಿತ್ತು. ಹೀಗಾಗಿ, ಆಕ್ಸಿಜನ್, ಹಾಸಿಗೆ ಹಾಗೂ ಔಷಧಿ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಭಾರತಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಅಮೆರಿಕಾ ಘೋಷಿಸಿತ್ತು. ಇದೀಗ ಭಾರತಕ್ಕೆ ಹೆಚ್ಚುವರಿಯಾಗಿ 41 ಬಿಲಿಯನ್ ಡಾಲರ್ ನೆರವು ನೀಡಿ, ಆ ಹಣವನ್ನು ಆರೋಗ್ಯ ಕ್ಷೇತ್ರದ ವೃದ್ಧಿಗೆ ಬಳಸಿಕೊಳ್ಳುವಂತೆ ಸಲಹೆ ನೀಡಿದೆ.




