America: ಸಿಯಾಟಲ್ ಫುಡ್ ಫೆಸ್ಟಿವಲ್‌ನಲ್ಲಿ ಇಬ್ಬರು ಸಾ*: ಐವರಿಗೆ ಗಂಭೀರ ಗಾಯ

America: ಅಮೆರಿಕದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್‌ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ“ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತೀ ವರ್ಷ ಇಲ್ಲಿ ಬೈಟ್ ಆಫ್ ಸಿಯಾಟಲ್ ಫೆಸ್ಟಿವಲ್ ನಡೆಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಈ ಹಬ್ಬ ಜರುಗಿದ್ದು, ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಕ್ಷ ಲಕ್ಷ ಜನ ಭಾಗವಹಿಸುವ ಕಾರ್ಯಕ್ರಮ ಇದಾಗಿದ್ದು, ತರಹೇವಾರಿ ಆಹಾರ ಮೇಳ ಇಲ್ಲಿ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರೂ ಸಾವನ್ನಪ್ಪಿದ್ದು, ಐವರು ಗಾಯಗ“ಂಡಿದ್ದಾರೆ.

ಅಮೆರಿಕದಲ್ಲಿ ಗುಂಡಿನ ದಾಳಿ ಹೆಚ್ಚುತ್ತಿದ್ದು, ಬಂದೂಕುಧಾರಿಗಳಿಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

About The Author