ಮಂಡ್ಯದಲ್ಲಿ ‘ಅಮೆರಿಕ’ ಕಂಪನಿ!

ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಕಂಪನಿಯ ಉನ್ನತಾಧಿಕಾರಿಗಳನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದ್ದೇವೆ, ಆದರೆ ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎಂಬ ನಮ್ಮ ಆಸಕ್ತಿ ಬಲವಾಗಿದೆ. ಈ ಪತ್ರದಲ್ಲಿ ಎಂ.ಬಿ. ಪಾಟೀಲ ಹೇಳಿದ್ದಾರೆ.

ಸ್ಯಾನ್ಸನ್ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಭಾರತೀಯ ವ್ಯವಹಾರಗಳ ಮುಖ್ಯಸ್ಥ ಅಭಯ್ ಕೆ.ರೈ ಅವರನ್ನು ಸಂಪರ್ಕಿಸಲು ಪ್ರಾಯೋಗಿಕವಾಗಿ ಹಲವಾರು ಪ್ರಯತ್ನಗಳು ನಡೆದಿದ್ದವು. ಇದರಿಂದ ಪ್ರಸ್ತಾವಿತ ಯೋಜನೆಯ ವಿವರಗಳನ್ನು ತಿಳಿದುಕೊಳ್ಳಲು ಸಹಾಯವಾಗಲಿದೆ ಎಂದು ಪಾಟೀಲ ಹೇಳಿದ್ದಾರೆ.

ಮಂಡ್ಯದಲ್ಲಿ 100 ಎಕರೆ ಭೂಮಿ ನೀಡಲು ಯಾವುದೇ ಅಡ್ಡಿ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ. ಕಂಪನಿಯ ಮನವಿ ಬಂದರೆ, ಭೂಮಂಜೂರಾತಿ ಮತ್ತು ಅಗತ್ಯ ಅನುಮೋದನೆಗಳೊಂದಿಗೆ ಮೂಲಸೌಕರ್ಯಗಳನ್ನು ತ್ವರಿತವಾಗಿ ಸಿದ್ಧಪಡಿಸಲು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಹೊಣೆ ಪಡೆದುಕೊಂಡಿದ್ದಾರೆ.

ಹೈಟೆಕ್ ಉದ್ಯಮಗಳನ್ನು ಬೆಳೆಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಹೂಡಿಕೆ ಯೋಜನೆ ರಾಜ್ಯದ ಕೈತಪ್ಪಬಾರದು. ಇದರಿಂದ ಬೆಂಗಳೂರಿನ ಹೊರಗಿನ ಭಾಗಗಳಲ್ಲಿ ಉದ್ಯೋಗ ಸೃಷ್ಟಿ ಮತ್ತು ಉದ್ಯಮಗಳ ಬೆಳವಣಿಗೆಗೂ ಪ್ರೋತ್ಸಾಹವಾಗಲಿದೆ ಅಂತ ಎಂ.ಬಿ. ಪಾಟೀಲ ಹೇಳಿದ್ದಾರೆ.

ವರದಿ : ಲಾವಣ್ಯ ಅನಿಗೋಳ

About The Author