ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದಾರೆ. ಬೆಳೆಗ್ಗೆ ೧೧. ೧೫ ರ ಸುಮಾರಿಗೆ ಗೆಜ್ಜಲಗೆರೆಯಲ್ಲಿ ಮೆಗಾ ಹಾಲಿನ ಡೈರಿ ಉದ್ಘಾಟಿಸಲಿದ್ದಾರೆ ಎಂದು ಮನ್ಮುಲ್ ಅಧ್ಯಕ್ಷ ರಾಮಚಂದ್ರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. 47 ಎಕರೆ ವಿಸ್ತೀರ್ಣದಲ್ಲಿ ಹಾಲು ಉತ್ಪಾದಕ ಘಟಕ ನಿರ್ಮಾಣವಾಗಿದ್ದು, 260.9 ಕೋಟಿ ರೂಪಾಯಿ ವೆಚ್ಚದಲ್ಲಿ ಡೈರಿಯನ್ನು ನಿರ್ಮಾಣ ಮಾಡಲಾಗಿದೆ. ಇನ್ನು ಡೈರಿಯಲ್ಲಿ ಒಂದು ದಿನಕ್ಕೆ 30 ಮೆಟ್ರಿಕ್ ಟನ್ ಹಾಲಿನ ಪೌಡರ್ ಉತ್ಪಾದನೆ ಮಾಡಲಾಗುತ್ತದೆ.
ರೈತರರೊಂದಿಗೆ ಸಂದಾನ ಸಫಲ : ಅಮಿತ್ ಶಾ ಅವರನ್ನು ರೈತರಿಗೆ ಭೇಟಿ ಮಾಡಿಸುವುದಾಗಿ ಕೆ.ಗೋಪಾಲಯ್ಯ ಭರವಸೆ
4 ಮೆಟ್ರಿಕ್ ಟನ್ ಕೋವಾ, 2 ಮೆಟ್ರಿಕ್ ಟನ್ ಪನ್ನೀರ್,10 ಲಕ್ಷ ಲೀಟರ್ ಹಾಲು, 12 ಮೆಟ್ರಿಕ್ ಟನ್ ತುಪ್ಪ10 ಮೆಟ್ರಿಕ್ ಟನ್ ಬೆಣ್ಣೆಯನ್ನು ಡೈರಿಯಲ್ಲಿ ಉತ್ಪಾದಿಸಲಾಗುತ್ತದೆ. ಒಂದು ವರ್ಷಕ್ಕೆ 6 ಕೋಟಿ ರೂಪಾಯಿ ಹಣ ಈ ಡೈರಿಯಿಂದ ಉಳಿತಾಯವಾಗಲಿದೆ. ಮೆಗಾ ಡೈರಿಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರಾಮಚಂದ್ರು ಅವರು ತಿಳಿಸಿದರು.
ಅಮಿತ್ ಶಾ ಅವರಿಂದ ಮೆಗಾ ಡೈರಿಯನ್ನು ಉದ್ಘಾಟನೆ ಮಾಡಿಸಲಾಗುತ್ತಿದ್ದು, ಮಾಜಿ ಪ್ರಧಾನಿ ದೇವೇಗೌಡ್ರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿ ಹಲವರು ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ.
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಎಷ್ಟು ಲಾಭ ಉಂಟು ಗೊತ್ತಾ..?
ಕ್ಯಾರೆಟ್ ಅನ್ನು ಹಸಿಯಾಗಿ ತಿಂದರೆ ಏನಾಗುತ್ತದೆ ಗೊತ್ತಾ? ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದೇ? ಅಥವಾ ಕೆಟ್ಟದೋ..!