Political News: ಇಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದು, ಮೈತ್ರಿ ಪಕ್ಷದೊಂದಿಗೆ ಸಭೆ ನಡೆಸಿದರು. ಬಳಿಕ ಡಿಕೆ ಬ್ರದರ್ಸ್ ಭದ್ರಕೋಟೆ ರಾಮನಗರದಿಂದಲೇ ಪ್ರಚಾರ ಆರಂಭಿಸಿದ ಅಮಿತ್ ಶಾ, ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಸರಣಿ ಸಭೆ ನಡೆಸಿದ ಅಮಿತ್ ಶಾ, ಬಳಿಕ ರಾಮನಗರಕ್ಕೆ ಆಗಮಿಸಿ, ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಪರ ಪ್ರಚಾರ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್‌ಗೆ ಓಟ್ ಹಾಕುವ ಮೂಲಕ, ಬಿಜೆಪಿಗೆ ಸಪೋರ್ಟ್ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ. ಡಾ.ಮಂಜುನಾಥ್ ವಿರುದ್ಧ ಈ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ನಿಂತಿದ್ದಾರೆ.
ಇನ್ನು ಇದಕ್ಕೂ ಮುನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ತಡವಾಗಿ ಬಂದಿದ್ದಕ್ಕೆ, ಕ್ಷಮೆಯಾಚನೆ ಮಾಡಿದ್ದಾರೆ. ಬಳಿಕ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಬಿಜೆಪಿಯನ್ನು ಬೆಂಬಲಿಸುವಂತೆ ಕೇಳಿದ್ದಾರೆ.
ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ
ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ