Hubli News: ಹುಬ್ಬಳ್ಳಿ: ಗೃಹಸಚಿವ ಅಮಿತ್ ಶಾ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಪರ ರೋಡ್ ಶೋ ನಡೆಸಿ, ಬಳಿಕ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಈಗ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಪ್ರಚಾರ ನಡೆಸಲಿದ್ದು, ವಿಮಾನ ನಿಲ್ದಾಣದಿಂದ ನೆಹರು ಮೈದಾನಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದಾರೆ. ನೆಹರು ಮೈದಾನದಲ್ಲಿ ಪ್ರಚಾರ ಕಾರ್ಯಕ್ರಮಕ್ಕೆ ಸಕಲ ತಯಾರಿ ಮಾಡಿಕೊಳ್ಳಲಾಗಿದ್ದು, ಬೃಹತ್ ಬಹಿರಂಗ ಸಮಾವೇಶ ನಡೆಯಲಿದೆ. ಈ ಕಾರಣಕ್ಕೆ ನೆಹರು ಮೈದಾನದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇನ್ನು ಹುಬ್ಬಳ್ಳಿಗೆ ಬಂದು ಅಮಿತ್ ಶಾ ಪ್ರಹ್ಲಾದ್ ಜೋಶಿ ಪರ ಪ್ರಚಾರ ಮಾಡಿ ನಡೆಯುತ್ತಾರಾ ಅಥವಾ ಮೃತ ನೇಹಾಳ ಮನೆಗೆ ಭೇಟಿ ನೀಡಿ, ಅವರ ತಂದೆ ತಾಾಯಿಯನ್ನು ಭೇಟಿಯಾಗುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.
ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್
ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ: ಸಿಎಂ
ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ




