ಎರಡು ವಾರಗಳ ಹಿಂದಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೀಗ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತ್ ಶಾರಲ್ಲಿ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಅವರನ್ನ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಯ್ತು.

ಕಳೆದ ಎರಡು ವಾರಗಳ ಹಿಂದಷ್ಟೇ ಕರೊನಾದಿಂದ ಗುಣಮುಖರಾಗಿದ್ದ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಇದೀಗ ಮತ್ತೆ ಅಮಿತ್ ಶಾರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಸಲಹೆ ಮೇರೆಗೆ ಅಮಿತ್ ಶಾರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅಂತಾ ಅಮಿತ್ ಶಾ ಆಪ್ತ ಮೂಲಗಳು ತಿಳಿಸಿವೆ.
ಅಮಿತ್ ಶಾ ಕೇವಲ ಸಾಮಾನ್ಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತಾ ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ. ಆಗಸ್ಟ್ 2ರಂದು ಅಮಿತ್ ಶಾರಿಗೆ ಕರೊನಾ ಪಾಸಿಟಿವ್ ಬಂದಿತ್ತು.





