ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುತ್ತಿದ್ದು, ಡಿಸೆಂಬರ್ 30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಆರಂಭಿಕ ಸಿದ್ದತೆಯನ್ನು ಶುರು ಮಾಡಿದ್ದು, ಮೂರು ದಿನಗಳ ಪ್ರವಾಸದಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರ ಭೇಟಿ ಮಾಡಿ, ಚುನಾವಣಾ ಸಿದ್ಧತೆ, ರಾಜ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆಯೂ ಪೂರ್ಣ ವಿವರವನ್ನು ಪಡೆದುಕೊಳ್ಳುವ ಸಾಧ್ಯತೆ ಇದೆ. ಡಿಸೆಂಬರ್ 30 ರಂದು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿಗೆ ರಕ್ತಾಭಿಷೇಕ.!
ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರಿಗೆ ಝಡ್ ಪ್ಲಸ್ ಸೆಕ್ಯೂರಿಟಿ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಮಂಡ್ಯ ವಿಶ್ವವಿದ್ಯಾಲಯಕ್ಕೆ ಡಿಸೆಂಬರ್ 29 ಮತ್ತು 30ರಂದು ರಜೆ ಘೋಷಿಸಲಾಗಿದೆ. ಕಾಲೇಜು ಆವರಣದಲ್ಲಿ ಡಿಸೆಂಬರ್ 30ರಂದು ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ ಅವರು ರಜಾ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮುಖದಲ್ಲಿ ವೃದ್ಧಾಪ್ಯ ಕಾಣಬಾರದು ಎಂದರೆ ಇಂದಿನಿಂದ ಈ ಆಹಾರಗಳನ್ನು ತಿನ್ನಲು ಪ್ರಾರಂಭಿಸಿ..!