Political News: ನಿನ್ನೆ ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಪರ ವಿರೋಧ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಿಂದು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ದೇಶದ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಜನ ಸಮುದಾಯ ಅನೇಕ ನಿರೀಕ್ಷೆಗಳನ್ನು ಮಾಡಿತ್ತು. ಎಲ್ಲವು ಹುಸಿಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 9 ಬಜೆಟ್ಗಳಲ್ಲಿ, ಇದು ಅತ್ಯಂತ ದುರ್ಬಲ ಬಜೆಟ್ ಎಂದು ಪರಮೇಶ್ವರ್ ಹೇಳಿದ್ದಾರೆ.
ಈ ಹಿಂದೆ ಬಜೆಟ್ಗಳನ್ನು ಕೃಷಿ, ಕೈಗಾರಿಕಾ ವಲಯಗಳಿಗೆ ಹೆಚ್ಚು ಪ್ರಾತಿನಿಧ್ಯ ಕೊಡುತ್ತಿದ್ದರು. ಬಡತನ ನಿರ್ಮೂಲನೆಗೆ ಸಂಬಂಧಿಸಿದಂತೆ ಅನೇಕ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಮನಮೋಹನ್ ಸಿಂಗ್ ಅವರು ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನೀಡಿದ್ದರು. ಇದೆಲ್ಲವನ್ನು ಗಾಳಿಗೆ ತೂರಿ, ಇಡೀ ದೇಶಕ್ಕೆ ನಿರಾಸೆ ಮಾಡಿದ್ದಾರೆ.




