ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳ ಪೈಕಿ, 5 ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಮೀಕ್ಷೆಗಳು, ಅಧ್ಯಯನ ವರದಿಗಳು ನಡೆದಿವೆ. ಇದೀಗ ಮತ್ತೆ ಗ್ಯಾರಂಟಿ ಯೋಜನೆಗಳ ಸಾಧಕ ಬಾಧಕಗಳು ಹಾಗೂ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನವೆಂಬರ್ 5ರಂದು ಈ ನಿಟ್ಟಿನಲ್ಲಿ ನಡೆಯಲಿರುವ ಅವಲೋಕನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಪ್ರತಿಷ್ಠಿತ 5 ಸಂಶೋಧನಾ ಸಂಸ್ಥೆಗಳು ಕೈಗೊಂಡಿರುವ ಅಧ್ಯಯನಗಳ ಸಂಶೋಧನಾ ಫಲಿತಾಂಶಗಳನ್ನು ಮತ್ತು ಕಾರ್ಯನೀತಿ ಸಲಹೆಗಳನ್ನು ಭಾಗೀದಾರ ಸರ್ಕಾರಿ ಇಲಾಖೆಗಳೊಂದಿಗೆ ಹಾಗೂ ಶೈಕ್ಷಣಿಕ ಸಂಸ್ಥೆಗಳ ತಜ್ಞರೊಂದಿಗೆ ಹಂಚಿಕೊಳ್ಳಲಾಗುತ್ತದೆ. 2025ರ ನವೆಂಬರ್ 5ರಂದು ಬೆಂಗಳೂರಿನ ಒಂದು ದಿನದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಲಂಡನ್‌ನ ಕಿಂಗ್ಸ್ ಕಾಲೇಜ್, ಮುಂಬೈನ ಎಕ್ಸ್.ಕೆ.ಡಿ.ಆರ್. ಫೋರಂ ಮತ್ತು ಅಜೀಂ ಪ್ರೇಮ್ ಜಿ. ವಿಶ್ವವಿದ್ಯಾಲಯ, ಲೋಕ್ ನೀತಿ-ಸಿಎಸ್ ಡಿಎಸ್ ಮತ್ತು ಇಂಡಸ್ ಆಕ್ಷನ್ ಹಾಗೂ ಜಸ್ಟ್ ಜಾಬ್ಸ್ ನೆಟ್ ವರ್ಕ್ಸ್ ಸಂಶೋಧನಾ ಸಂಸ್ಥೆಗಳು ಅಧ್ಯಯನವನ್ನು ಕೈಗೊಂಡಿವೆ.

