Tuesday, January 21, 2025

Latest Posts

ಅಮೃತಸರದಲ್ಲಿ ಮತ್ತೊಂದು ಪಾಕ್ ಡ್ರೋನ್ ಅನ್ನು ಹೊಡೆದುರುಳಿಸಿದೆ ಬಿಎಸ್ಎಫ್ ಪಡೆ

- Advertisement -

ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿರುವುದನ್ನು ಗಮನಿಸಿದ ಬಿಎಸ್‌ಎಫ್ ಪಡೆಗಳು ಅದನ್ನು ಹೊಡೆದುರುಳಿಸಿದವು. ಬಹುತೇಕ ಹಾನಿಗೊಳಗಾದ ಸ್ಥಿತಿಯಲ್ಲಿದ್ದ ಒಂದು ಹೆಕ್ಸಾಕಾಪ್ಟರ್ ಜೊತೆಗೆ ಶಂಕಿತ ವಸ್ತುವನ್ನು ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಮೇಲೆ ತನ್ನ ದಾಳಿಯನ್ನು ಮುಂದುವರೆಸಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪಾಕಿಸ್ತಾನದಿಂದ ಪ್ರವೇಶಿಸಿದ ಮತ್ತೊಂದು ಡ್ರೋನ್ ಅನ್ನು ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ಹೊಡೆದುರುಳಿಸಿದೆ.

ಬ್ರಿಟಿಷ್ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಚೀನಾ ವ್ಯವಸ್ಥಿತ ಸವಾಲನ್ನು ಒಡ್ಡುತ್ತದೆ : ಯುಕೆ ಪ್ರಾಧಾನಿ ರಿಷಿ ಸುನಕ್

ಈ ಪ್ರದೇಶದಲ್ಲಿ ಇದೇ ರೀತಿಯ ಘಟನೆ ವರದಿಯಾದ ಎರಡು ದಿನಗಳ ನಂತರ. ಡ್ರೋನ್ ಚಹರ್‌ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿರುವುದನ್ನು ಗಮನಿಸಿದ ಸೈನಿಕರು ಅದರ ಮೇಲೆ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಮತ್ತೊಂದು ಕಳ್ಳಸಾಗಣೆ ಪ್ರಯತ್ನವನ್ನು ಬಿಎಸ್ ಎಫ್ ಪಡೆ ವಿಫಲಗೊಳಿಸಿದರು.

- Advertisement -

Latest Posts

Don't Miss