Friday, November 22, 2024

Latest Posts

“ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಜನ ವಿರೋಧಿ ಬೋಗಸ್ ಬಜೆಟ್”

- Advertisement -

Political News: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಅನ್ನು ಖಂಡಿಸಿ ಸದನ ಬಹಿಷ್ಕರಿಸಿ, ವಿಧಾನ ಸೌಧದ ಎದುರು ನಮ್ಮ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರೆಲ್ಲ ಸೇರಿ ಪ್ರತಿಭಟನೆ ನಡೆಸಿದರು.

ಈ ವೇಳೆ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಿಸದೇ, ಅಭಿವೃದ್ಧಿಯಲ್ಲಿ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡದೇ, ಬರಗಾಲದಿಂದ ನೊಂದು ತೀವ್ರ ಸಂಕಷ್ಟದಲ್ಲಿರುವ ರೈತರನ್ನು ನಿರ್ಲಕ್ಷಿಸಿ, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಗಳಿಗೂ ನಿರಾಸೆ ಮೂಡಿಸಿದ ಸರ್ಕಾರದ ಬಜೆಟ್ ಅನ್ನು ಖಂಡಿಸಿದರು.

. ಈ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕರಾದ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ , ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಸೇರಿದಂತೆ ಎರಡೂ ಪಕ್ಷಗಳ ಉಭಯ ಸದನಗಳ ಸದಸ್ಯರು ಭಾಗವಹಿಸಿದ್ದರು.

‘ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಆದರೆ ಬಿಜೆಪಿಗರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ’

‘ಇದು ದೇವೇಗೌಡರ ಜಿಲ್ಲೆ, ಇಲ್ಲಿ ಕಾಂಗ್ರೆಸ್‌ಗೆ ಅನುಕೂಲ ಆಗಲ್ಲ ಅಂತ ನಮ್ಮ ಜಿಲ್ಲೆಯನ್ನು ಕಡೆಗಣಿಸಿದ್ದಾರೆ’

‘ನಮ್ಮ ಹಾಸನ ಜಿಲ್ಲೆಗೆ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸಂಪೂರ್ಣ ಫೇಲ್ಯೂರ್ ಆಗಿರುವ ಬಜೆಟ್’

- Advertisement -

Latest Posts

Don't Miss