ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ, ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

Political News: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭ, ಮುಂದಿನ ವರ್ಷ ಜನವರಿ 22ರಂದು ನಡೆಯಲಿದೆ. ಇದಕ್ಕೆ ಸೆಲೆಬ್ರಿಟಿಗಳು, ಹಲವು ಗಣ್ಯರು ಸೇರಿ, ರಾಜಕೀಯ ವ್ಯಕ್ತಿಗಳಿಗೆ ಆಮಂತ್ರಿಸಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿಯವರಿಗೂ ಕೂಡ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರ ಸಿಕ್ಕಿದ್ದು. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ಶ್ರೀ ರಾಮ ಲಾಲ್ ಅವರು ಹಾಗೂ ಇತರರು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಪರವಾಗಿ ಆಹ್ವಾನ ನೀಡಿದರು. ನನ್ನನ್ನು ಆಹ್ವಾನಿಸಿದ ಅವರೆಲ್ಲರಿಗೂ ಧನ್ಯವಾದಗಳು. ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಹಾಗೂ ಶ್ರೀರಾಮ ಸೇವಾ ಕೈಂಕರ್ಯದಲ್ಲಿ ಕುಟುಂಬ ಸಮೇತವಾಗಿ ಸಂತೋಷದಿಂದ ಭಾಗಿಯಾಗುತ್ತೇನೆ.

‘ಮಿಮಿಕ್ರಿ ಅನ್ನೋದು ಒಂದು ಕಲೆ, ಅದನ್ನು ಸಾವಿರ ಬಾರಿ ಮಾಡುತ್ತೇನೆ’

‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’

‘ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ?’

About The Author