ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಒಂದೊಂದೆ ಸತ್ಯಗಲೂ ಆಚೆ ಬರುತ್ತಿವೆ . ಇದೀಗ ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರವನ್ನು ರಾಷ್ಟ, ಅಂತಾರಾಷ್ಟಿಯ ಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್ ಮ್ಯಾನ್ ಅಂದರೆ ಭೀಮ ಯಾರು ಎನ್ನುವುದೇ ಗೊತ್ತಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ ಮಾಸ್ಕ್ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್ಕ ಮ್ಯಾನ್ ಯಾರು? ಏನು? ಎಲ್ಲಿಯವನು? ಎನ್ನುವ ಒಂದೊಂದೇ ನಿಗೂಡಗಳು ಆಚೆ ಬರುತ್ತಿವೆ.
ನಿನ್ನೆ ಅಷ್ಟೆ ಅನಮಿಕನ ಸ್ನೇಹಿತ ರಾಜು ಎನ್ನುವಾತ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದ. ಇದರ ಬೆನ್ನಲ್ಲೇ ಇದೀಗ ಸ್ವತಃ ಅನಾಮಿಕನ ಆವ ಭಾವ, ಅವನ ದೇಹದ ಆಕಾರ ನೋಡಿ ಮಾಜಿ ಪತ್ನಿ ಪ್ರತ್ಯಕ್ಷಳಾಗಿದ್ದು, ಮಾಸ್ಕ್ ಮ್ಯಾನ್ ನ ಹಿನ್ನಲೆಯನ್ನು ಬಿಚ್ಚಿಟ್ಟಿದ್ದಾಳೆ.
ಮಂಡ್ಯದಲ್ಲಿ ಮಾತನಾಡಿರುವ ಅನಾಮಿಕನ ಮದಲ ಪತ್ನಿ, ,1999ರಲ್ಲಿ ಮದುವೆಯಾಗಿದ್ದು, 7 ವರ್ಷ ಸಂಸಾರ ಮಾಡಿದ್ದೆವು. ನಮಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಅವನ ಬಳಿ ಒಳ್ಳೆತನ ಇರಲಿಲ್ಲ. ಬರೀ ಸುಳ್ಳು ಹೇಳುತ್ತಿದ್ದ.ಮದುವೆ ಬಳಿಕ ಧರ್ಮಸ್ಥಳದ ನೇತ್ರಾವತಿಯಲ್ಲಿ 7 ವರ್ಷ ಇದ್ದೆವು. ಧರ್ಮಸ್ಥಳದಲ್ಲಿ ಕಸಗುಡಿಸುವುದು, ಬಾತ್‌ರೂಂ ತೊಳೆಯುವುದು ಮಾಡುತ್ತಿದ್ದರು. ಆದರೆ, ಈಗ ಆತ ನೂರಾರು ಶವ ಹೂತಿದ್ದೇನೆ ಎಂದು ಹೇಳುತ್ತಿರುವುದು ಸುಳ್ಳು. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರುಬಹುದು ಎಂದು ಸ್ಫೋಟಕ ವಿಚಾರಗಳನ್ಜು ಬಿಚ್ಚಿಟ್ಟಿದ್ದಾಳೆ.
ನನಗೆ ಹೊಡೆಯುವುದು, ಬಡಿಯುವುದು ಮಾಡುತ್ತಿದ್ದ. ವಿಚ್ಚೇದನ ವೇಳೆ ಜೀವನಾಂಶ ಕೊಡಲು ಸುಳ್ಳು ಹೇಳಿದ್ದ. ಜೀವನಾಂಶ ಕೊಡಲು ಕೆಲಸ ಮಾಡುತ್ತಿಲ್ಲ ಎಂದು ಕೋರ್ಟ್‌ಗೆ ಸುಳ್ಳು ಹೇಳಿದ್ದ. ಅಲ್ಲು ನನಗೆ ನ್ಯಾಯ ಸಿಗಲಿಲ್ಲ. ನನ್ನ ತಾಯಿಯೇ ನನ್ನ ಮಕ್ಕಳನ್ನ ಸಾಕಿದ್ರು. ಧರ್ಮಸ್ಥಳ ಎಂದರೆ ನಮ್ಮ ಮನೆಯವರಿಗೆಲ್ಲಾ ಪ್ರೀತಿ. ಗುಂಡಿ ತೋಡಿದ್ರು ಏನು ಸಿಕ್ಕಿಲ್ಲ ಅಂದ್ರೆ ಏನೋ ಕಿತಾಪತಿ ಮಾಡುತ್ತಿದ್ದಾನೆ ಎನಿಸುತ್ತದೆ. ಅತ್ಯಾಚಾರ, ಕೊಲೆಯಾದ ಶವಗಳನ್ನು ಹೂತ ಬಗ್ಗೆ ಯಾವತ್ತು ಹೇಳಿಲ್ಲ. ಯಾವಾಗಲೂ ಅಹಂಕಾರದಲ್ಲೇ ಮೆರೆಯುತ್ತಿದ್ದ. ಅಣ್ಣ ತಮ್ಮಂದಿರಿಗೂ ಬಾಯಿಗೆ ಬಂದಹಾಗೇ ಬೈಯ್ಯುತ್ತಿದ್ದ ಎಂದರು.
ಅವನು ಮೋಸಗಾರ, ಸುಳ್ಳುಗಾರ. ಅವನನ್ನು ಬಿಟ್ಟು ಬಂದದ್ದು ಒಳ್ಳೆಯದಾಯಿತು. ಇಟ್ಕೊಂಡಳವಳನ್ನ ಮದುವೆ ಮಾಡಿಕೊಳ್ಳಲು ನನಗೆ ಚಿತ್ರಹಿಂಸೆ ಕೊಟ್ಟು ಓಡಿಸಿದ. ಕೆಲಸಕೊಟ್ಟ, ಅನ್ನ ಕೊಟ್ಟ ಜಾಗಕ್ಕೆ ಅನ್ಯಾಯ ಮಾಡಬಾರದು. ಅವಳ ಒತ್ತಡಕ್ಕೆ, ಆಮಿಷಕ್ಕೆ ಒಳಗಾಗಿ ಹೀಗೆ ಮಾಡ್ತಿದ್ದಾನೆ. ದೇವಸ್ಥಾನದ ಹೆಸರು ಕೆಡಿಸುತ್ತಿರುವ ಅವನು ಹಾಳಾಗಬೇಕು.
ಅವನು ಸತ್ತು, ಹೆಣ ಆದರೂ ನಾವು ಹೋಗಿ ನೋಡುವುದಿಲ್ಲ. ಮಾಸ್ಕ್ ಮ್ಯಾನ್ ಅಣ್ಣ ಹಾಗೂ ಮನೆಯವರೆಲ್ಲ ಒಳ್ಳೆಯವರು. ಆತನ ನನಗೆ ಹೊಡೆದಾಗ ನನ್ನ ಪರವಾಗಿ ಇದ್ದರು. ಈತ ಸರಿ ಇಲ್ಲ. ಅವನನ್ನ ಟಿವಿಯಲ್ಲಿ ನೋಡಿದ ಮೊದಲ ದಿನವೇ ಗೊತ್ತಾಯಿತು. ಅವನ ದೇಹದ ಆಕಾರ ನೋಡಿ ಗೊತ್ತಾಯಿತು ಎಂದು ಹೇಳಿದ್ದಾರೆ. ಇದೀಗ ಈ ವಿಚಾರ ಎಲ್ಲೆಡೆ ಚರ್ಚೆವಾಗುತ್ತಿದ್ದು, ಅನಾಮಿಕ ವಿರುದ್ದ ಅನುಮಾನಗಳನ್ನು ಹುಟ್ಟುಹಾಕಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ