BREAKING NEWS: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ಉಸ್ತುವಾರಿ ಸಚಿವರಾಗಿ ನೇಮಕ

ಬೆಂಗಳೂರು: ಈಗಾಗಲೇ ವಿವಿಧ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಇದೀಗ ಬಾಕಿ ಇದ್ದಂತ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್, ಕೊಪ್ಪಳ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಶಶಿಕಲಾ ಜೊಲ್ಲೆಯವರನ್ನು ನೇಮಿಸಿ ಆದೇಶಿಸಿದ್ದಾರೆ.

About The Author