- Advertisement -
www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು
ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ ಮಾಡಿರುವ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆ ಬದಲು ಬೇರೆ ಖಾತೆಗಳನ್ನು ನೀಡಬೇಕು ಎಂಬ ಬೇಡಿಕೆ ಇಟ್ಟಿರುವ ಆನಂದ್ ಸಿಂಗ್ ಬೇಡಿಕೆಗೆ ಸ್ಪಂದಿಸದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ವಿನುತಾ ಹವಾಲ್ದಾರ್ ಕರ್ನಾಟಕ ಟಿವಿ ಬೆಂಗಳೂರು
- Advertisement -